ನವದೆಹಲಿ: ಮುಸ್ಲಿಮರ ಪವಿತ್ರ ಮಾಸ ರಂಜಾನ್ ವೇಳೆ ಜಮ್ಮು ಕಾಶ್ಮೀರದಲ್ಲಿ ಯಾವುದೇ ತರನಾದ ಕಾರ್ಯಾಚರಣೆಗಳನ್ನು ಕೈಗೊಳ್ಳದಂತೆ ಕೇಂದ್ರ ನಿರ್ಧರಿಸಿದ್ದು, ಇದು ಪ್ರಧಾನಿ ನರೇಂದ್ರ ಮೋದಿಯವರು ಜನರ ಬಗ್ಗೆ ಇಟ್ಟುಕೊಂಡಿರುವ ಸಂವೇದನಾಶೀಲತೆಯನ್ನು ತೋರಿಸುತ್ತದೆ ಎಂದು ಬಿಜೆಪಿ ಮುಖಂಡ ರಾಮ್ ಮಾಧವ್ ಹೇಳಿದ್ದಾರೆ.
‘ಮೋದಿ ಕಾಶ್ಮೀರ ಕಣಿವೆಯ ಜನರೆಡೆಗೆ ತಮ್ಮ ಪ್ರಮಾಣಿಕತೆ, ಗೌರವ ಮತ್ತು ಸಂವೇದನಾಶೀಲತೆಯನ್ನು ತೋರಿಸಿದ್ದಾರೆ. ಹೀಗಾಗಿಯೇ ಭದ್ರತೆಪಡೆಗಳಿಗೆ ಕಾರ್ಯಾಚರಣೆ ಸ್ಥಗಿತಗೊಳಿಸುವಂತೆ ಸೂಚನೆ ನೀಡಿದ್ದಾರೆ. ಆದರೆ ಭಯೋತ್ಪಾದಕರು ತಮ್ಮ ಕುಚೇಷ್ಟೆಯನ್ನು ತೋರಿಸಿದರೆ ಪಡೆಗಳು ಸುಮ್ಮನೆ ಕೈಕಟ್ಟಿ ಕುಳಿತುಕೊಳ್ಳಲಾರವು, ಶಾಂತಿ ಸ್ಥಾಪನೆಗೆ ಬೇಕಾದ ಎಲ್ಲಾ ಕ್ರಮಗಳನ್ನು ಕೈಗೊಳ್ಳುತ್ತೇವೆ’ ಎಂದಿದ್ದಾರೆ.
ಶಾಂತಿಪ್ರಿಯ ಮುಸ್ಲಿಮರು ಶಾಂತಿಯುತ ವಾತಾವರಣದಲ್ಲಿ ಉಪವಾಸ ಆಚರಿಸಲಿ ಎಂಬ ಕಾರಣಕ್ಕೆ ಈ ನಿರ್ಧಾರವನ್ನು ತೆಗೆದುಕೊಂಡಿರುವುದಾಗಿ ಗೃಹಸಚಿವಾಲಯ ತಿಳಿಸಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.