ಬೆಂಗಳೂರು: ಇತ್ತೀಚಿಗೆ ನಡೆದ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಅಕ್ರಮಗಳು ನಡೆದಿವೆ ಎಂದು ಮಾಜಿ ಸಿಎಂ ಬಿಎಸ್ ಯಡಿಯೂರಪ್ಪನವರು ಆರೋಪಿಸಿದ್ದಾರೆ. ಈ ಬಗ್ಗೆ ಅವರು ಚುನಾವಣಾ ಆಯೋಗಕ್ಕೆ ಪತ್ರ ಬರೆದಿದ್ದಾರೆ.
ಕರ್ನಾಟಕ ಚುನಾವಣೆಗೂ ಮುನ್ನ ಹಲವಾರು ಅಕ್ರಮಗಳ ಬಗ್ಗೆ ಚುನಾವಣಾ ಅಧಿಕಾರಿಗಳು ಪತ್ತೆ ಮಾಡಿದ್ದಾರೆ, ಆದರೆ ಈ ನಿಟ್ಟಿನಲ್ಲಿ ಯಾವುದೇ ಕ್ರಮಗಳನ್ನು ಜರುಗಿಸಲಾಗಿಲ್ಲ ಎಂದು ಅವರು ಆರೋಪಿಸಿದ್ದಾರೆ.
ವಿಜಯಪುರ ಜಿಲ್ಲೆಯ ಮನಗುಲಿ ಗ್ರಾಮದಲ್ಲಿ ವಿವಿಪ್ಯಾಟ್ಗಳು ಅನಾಥವಾಗಿ ಬಿದ್ದಿದ್ದವು, ಇದು ಅಕ್ರಮಗಳು ಎಷ್ಟರ ಮಟ್ಟಿಗೆ ನಡೆದಿದೆ ಎಂಬುದಕ್ಕೆ ಉದಾಹರಣೆ. ಈ ಬಗ್ಗೆ ಚುನಾವಣಾ ಆಯೋಗ ಗಂಭೀರ ಪರಿಶೀಲನೆ ನಡೆಸಿದೆ ಎಂದು ಭಾವಿಸುತ್ತೇನೆ ಎಂದಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.