ಬೆಂಗಳೂರು: ಜೆಡಿಎಸ್-ಕಾಂಗ್ರೆಸ್ ಸರ್ಕಾರದ ಪ್ರಮಾಣವಚನ ದಿನವಾದ ಇಂದು ಬಿಜೆಪಿ ‘ಜನಮತ ವಿರೋಧಿ ದಿನ’ವನ್ನಾಗಿ ಆಚರಿಸಲು ನಿರ್ಧರಿಸಿದೆ.
ಜೆಡಿಎಸ್ ಮತ್ತು ಕಾಂಗ್ರೆಸ್ ನಡುವಣ ಮೈತ್ರಿ ಅಪವಿತ್ರವಾದುದು, ಇವರುಗಳು ಜನಾದೇಶವನ್ನು ಹೈಜಾಕ್ ಮಾಡಿಕೊಂಡಿದ್ದಾರೆ ಎಂದು ಬಿಜೆಪಿ ಆರೋಪಿಸಿದೆ.
ರಾಜ್ಯದ ಎಲ್ಲಾ ವಿಧಾನಸಭಾ ಕ್ಷೇತ್ರಗಳಲ್ಲೂಈ ಬಿಜೆಪಿ ಪ್ರತಿಭಟನೆ ನಡೆಸಲು ನಿರ್ಧರಿಸಿದ್ದು, ಬಿಎಸ್ ಯಡಿಯೂರಪ್ಪ ಇದರ ನೇತೃತ್ವವಹಿಸಲಿದ್ದಾರೆ. ರಾಜ್ಯಾದ್ಯಂತ ಬಿಜೆಪಿ ಕಾರ್ಯಕರ್ತರು ಕಪ್ಪು ಬಾವುಟಗಳನ್ನು ಹಿಡಿದು ಪ್ರತಿಭಟಿಸಲಿದ್ದಾರೆ.
‘ಆಡಳಿತ ಪಕ್ಷವಾಗಿದ್ದ ಕಾಂಗ್ರೆಸ್ನ್ನು ತಿರಸ್ಕರಿಸಿ ಬಿಜೆಪಿಗೆ ಹೆಚ್ಚಿನ ಸ್ಥಾನ ಗೆಲ್ಲಿಸಿದ ರಾಜ್ಯದ ಜನತೆಯ ಆಶೋತ್ತರಗಳಿಗೆ ವಿರುದ್ಧವಾಗಿ ಕಾಂಗ್ರೆಸ್ ಜೆಡಿಎಸ್ ಸರ್ಕಾರ ರಚನೆಯಾಗುತ್ತಿದೆ, ಹೀಗಾಗಿ ಬುಧವಾರ ಈ ಅಪವಿತ್ರ ಮೈತ್ರಿ ಸರ್ಕಾರ ರಚನೆಯ ವಿರುದ್ಧ ಭಾರೀ ಸಂಖ್ಯೆಯೊಂದಿಗೆ ಎಲ್ಲಾ ವಿಧಾನಸಭಾ ಕ್ಷೇತ್ರಗಳಲ್ಲಿಯೂ ಜನ ಮತ ವಿರೋಧಿ ದಿನ ಆಚರಣೆಯ ಮೂಲಕ ಪ್ರತಿಭಟನೆ ನಡೆಸಲಿದ್ದೇವೆ’ ಎಂದು ಹೇಳಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.