ನವದೆಹಲಿ: ವಿಶ್ವ ಭಾರತಿ ಘಟಿಕೋತ್ಸವದ ಸಂದರ್ಭದಲ್ಲಿ ಬಾಂಗ್ಲಾದೇಶ ಪ್ರಧಾನಿ ಶೇಖ್ ಹಸೀನಾ ಮತ್ತು ಪ್ರಧಾನಿ ನರೇಂದ್ರ ಮೋದಿ ಪರಸ್ಪರ ಭೇಟಿಯಾಗಲಿದ್ದು, ತೀಸ್ತಾ ನದಿ ನೀರು ಹಂಚಿಕೆ, ರೊಹಿಂಗ್ಯಾ ವಿಷಯ ಮತ್ತು ಗಡಿಯಾಚೆಗಿನ ಭಯೋತ್ಪಾದನೆಯ ಬಗ್ಗೆ ಮಾತುಕತೆ ನಡೆಸಲಿದ್ದಾರೆ.
ಉಭಯ ದೇಶಗಳ ಸಾಂಸ್ಕೃತಿಕ ಸಹಕಾರವನ್ನು ಮತ್ತಷ್ಟು ಉತ್ತೇಜಿಸುವ ಅಜೆಂಡಾದೊಂದಿಗೆ ಹಸೀನಾ ಭಾರತಕ್ಕೆ ಭೇಟಿಕೊಡಲಿದ್ದಾರೆ ಎಂದು ಬಾಂಗ್ಲಾ ಮಾಹಿತಿ ಸಚಿವ ಹಸನುಲ್ ಹಕ್ ತಿಳಿಸಿದ್ದಾರೆ.
ಪಶ್ಚಿಮಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯವರು ತೀಸ್ತಾ ನದಿ ನೀರು ಹಂಚಿಕೆಗೆ ಇನ್ನೂ ಒಪ್ಪಿಗೆ ಸೂಚಿಸಿಲ್ಲ, ಪಶ್ಚಿಮಬಂಗಾಳಕ್ಕೆ ಇದು ನೀರಿನ ಸಮಸ್ಯೆಯನ್ನು ಉಂಟುಮಾಡುವ ಆತಂಕವನ್ನು ಅವರು ವ್ಯಕ್ತಪಡಿಸಿದ್ದಾರೆ.
ಮೋದಿ ಮತ್ತು ಹಸೀನಾ ಭಾಗಿಯಾಗುವ ಸಮಾರಂಭದಲ್ಲಿ ಮಮತಾ ಭಾಗಿಯಾಗುವರೇ ಎಂಬುದು ಇನ್ನೂ ದೃಢಪಟ್ಟಿಲ್ಲ. ತೀಸ್ತಾ ನದಿ ನೀರಿನ ಬಗ್ಗೆ ಹಲವಾರು ಅನೌಪಚಾರಿಕ ಮಾತುಕತೆಗಳು ನಡೆಯುತ್ತಿವೆ ಎಂದು ಹಕ್ ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.