ಬೆಂಗಳೂರು: ಕರ್ನಾಟಕದ 25ನೇ ಮುಖ್ಯಮಂತ್ರಿಯಾಗಿ ಹೆಚ್. ಡಿ. ಕುಮಾರಸ್ವಾಮಿ ಅವರು ಬುಧವಾರ ಪ್ರಮಾಣವಚನ ಸ್ವೀಕರಿಸಿದರು ಹಾಗೂ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ಅಧ್ಯಕ್ಷ ಡಾ| ಜಿ. ಪರಮೇಶ್ವರ ರಾಜ್ಯದ ಉಪಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದರು.
ರಾಜ್ಯಪಾಲ ವಜುಬಾಯಿ ವಾಲಾ ಅವರು ವಿಧಾನಸೌಧದ ಹೊರಗೆ ನಡೆದ ಸಮಾರಂಭದಲ್ಲಿ ಹೆಚ್. ಡಿ. ಕುಮಾರಸ್ವಾಮಿ ಮತ್ತು ಡಾ| ಜಿ. ಪರಮೇಶ್ವರ ಅವರಿಗೆ ಪ್ರತಿಜ್ಞಾ ವಿಧಿ ಬೋಧಿಸಿದರು.
ಈ ಸಮಾರಂಭದಲ್ಲಿ ಯುಪಿಎ ಅಧ್ಯಕ್ಷೆ ಸೋನಿಯಾ ಗಾಂಧಿ, ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ, ಬಹುಜನ ಸಮಾಜ ಪಕ್ಷದ ಮುಖ್ಯಸ್ಥೆ ಮಾಯಾವತಿ, ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ರಾಷ್ಟ್ರೀಯ ಜನತಾ ದಳ ನಾಯಕ ಸಚಿವ ಲಾಲು ಪ್ರಸಾದ್ ಅವರ ಮಗ ತೇಜಸ್ವಿ ಯಾದವ್, ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಮತ್ತು ಆಂಧ್ರಪ್ರದೇಶದ ಎನ್.ಚಂದ್ರಬಾಬು ನಾಯ್ಡು ಮತ್ತು ಹಲವಾರು ಗಣ್ಯರು ಸೇರಿದಂತೆ ರಾಜಕೀಯ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.