ಲಕ್ನೋ: ಉರ್ದುವಿನೊಂದಿಗೆ ಇಂಗ್ಲೀಷ್ ಮತ್ತು ಹಿಂದಿಯನ್ನೂ ಮದರಸಾಗಳು ಕಡ್ಡಾಯವಾಗಿ ಕಲಿಸಬೇಕು ಎಂದು ಉತ್ತರಪ್ರದೇಶ ಸರ್ಕಾರ ಆದೇಶ ಹೊರಡಿಸಿದೆ, ಅಲ್ಲದೇ ಇತರ ಶಾಲೆಗಳಲ್ಲಿ ಪಾಲಿಸುವ ಎನ್ಸಿಇಆರ್ಟಿ ಪಠ್ಯಕ್ರಮವನ್ನು ಅನುಸರಿಸಬೇಕು ಎಂದು ಸೂಚಿಸಿದೆ.
ಎಲ್ಲದಕ್ಕೂ ಹೆಚ್ಚಾಗಿ ವಿಜ್ಞಾನ, ಗಣಿತ, ಇಂಗ್ಲೀಷ್, ಹಿಂದಿ, ಸಮಾಜ ವಿಜ್ಞಾನಗಳನ್ನೂ ಮದರಸಾಗಳ ಪಠ್ಯಕ್ರಮದಲ್ಲಿ ಪರಿಚಯಿಸಲು ನಿರ್ಧರಿಸಿದೆ.
ಸಿಎಂ ಯೋಗಿ ಆದಿತ್ಯನಾಥ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ.
ಇದುವರೆಗೆ ಮದರಸಾಗಳಲ್ಲಿ ಕೇವಲ ಉರ್ದು ಮಾಧ್ಯಮವನ್ನು ಬೋಧಿಸಲಾಗುತ್ತಿತ್ತು. ಆದರೆ ಮದರಸಾಗಳ ಆಧುನೀಕರಣಕ್ಕೆ ಒತ್ತು ನೀಡುವ ಸಲುವಾಗಿ ಇಂಗ್ಲೀಷ್, ಹಿಂದಿ ಜೊತೆಗೆ ಗಣಿತ, ವಿಜ್ಞಾನ ವಿಷಯಗಳನ್ನು ಅಲ್ಲಿ ಬೋಧಿಸಲು ಮತ್ತು ಕಂಪ್ಯೂಟರೀಕರಣಗೊಳಿಸಲು ಸರ್ಕಾರ ನಿರ್ಧರಿಸಿದೆ. ಸಂಸ್ಕೃತ ಶಾಲೆಗಳಿಗೂ ಇದೇ ರೀತಿಯ ನಿಯಮವನ್ನು ಅಳವಡಿಸುವುದಾಗಿ ಹೇಳಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.