ಅಲಹಾಬಾದ್: ಖ್ಯಾತ ಅಲಹಾಬಾದ್ ನಗರದ ಹೆಸರನ್ನು ಬದಲಾಯಿಸಲು ಉತ್ತರಪ್ರದೇಶ ಸರ್ಕಾರ ನಿರ್ಧರಿಸಿದೆ, ಮೂಲಗಳ ಪ್ರಕಾರ ಮುಂಬರುವ ಕುಂಭ ಮೇಳದ ವೇಳೆಗೆ ಈ ನಗರದ ಹೆಸರು ಪ್ರಯಾಗ್ರಾಜ್ ಆಗಿ ಬದಲಾಗಲಿದೆ.
ಪ್ರಯಾಗ್ ಅಲಹಾಬಾದ್ನ ಅತ್ಯಂತ ಪವಿತ್ರ ನಗರ, ಇಲ್ಲಿ ಗಂಗಾ, ಯಮುನಾ, ಸರಸ್ವತಿ ನದಿಗಳು ಹರಿಯುತ್ತವೆ. 12 ವರ್ಷಗಳಿಗೊಮ್ಮೆ ನಡೆಯುವ ಕುಂಭಮೇಳಕ್ಕೂ ಈ ನಗರ ಪ್ರಸಿದ್ಧವಾಗಿದೆ. ಹೀಗಾಗಿ ಇಡೀ ಅಲಹಾಬಾದ್ಗೆ ಪ್ರಯಾಗ್ರಾಜ್ ಎಂದು ಮರುನಾಮಕರಣ ಮಾಡಲು ನಿರ್ಧರಿಸಲಾಗಿದೆ.
ಪ್ರಯಾಗ್ನಿಂದಾಗಿ ಅಲಹಾಬಾದ್ಗೆ ಒಂದು ಗುರುತು ಇದೆ, ಹೀಗಾಗಿ ಪ್ರಯಾಗ್ರಾಜ್ ಎಂದು ಮರುನಾಮಕರಣಕ್ಕೆ ನಿರ್ಧರಿಸಲಾಗಿದೆ ಎಂದು ಯುಪಿ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.