ಚೆನ್ನೈ: ಕೆಲವು ಸಮಾಜಘಾತುಕ ಶಕ್ತಿಗಳು, ರಾಜಕಾರಣಿಗಳಿಗೆ ಸಂಬಂಧಿಸಿದ ಎನ್ಜಿಓಗಳು ಸ್ಟೆರ್ಲೈಟ್ ಪ್ರತಿಭಟನೆಯ ಹಿಂದಿದೆ ಎಂದು ತಮಿಳುನಾಡು ಸಿಎಂ ಇಕೆ ಪಳಣಿಸ್ವಾಮಿ ಗಂಭೀರ ಆರೋಪ ಮಾಡಿದ್ದಾರೆ.
ಸ್ಟೆರ್ಲೈಟ್ ಪ್ಲಾಂಟ್ ಮುಚ್ಚುವಂತೆ ಆಗ್ರಹಿಸಿ ನಡೆಯುತ್ತಿರುವ ಭಾರೀ ಪ್ರತಿಭಟನೆಯಲ್ಲಿ ಇದುವರೆಗೆ 13 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಪಳನಿಸ್ವಾಮಿ, ಪೊಲೀಸರು ಕಾನೂನು ಸುವ್ಯವಸ್ಥೆ ನಿರ್ವಹಣೆ ಮಾಡುತ್ತಿದ್ದಾರೆ ಎಂದಿದ್ದಾರೆ.
ಪೊಲೀಸರ ವಿರುದ್ಧ ಪ್ರತಿಭಟನಾಕಾರರು ಹಿಂಸಾಚಾರ ನಡೆಸಲೆತ್ನಿಸಿದ ಹಿನ್ನಲೆಯಲ್ಲಿ ಫೈರಿಂಗ್ ಮಾಡುವುದು ಅನಿವಾರ್ಯವಾಯಿತು ಎಂದಿದ್ದಾರೆ.
ಈ ನಡುವೆ ಘಟನೆಗೆ ಸಂಬಂಧಿಸಿದಂತೆ ಕೇಂದ್ರ ಗೃಹ ಸಚಿವಾಲಯ ತಮಿಳುನಾಡು ಸಕಾರದಿಂದ ವರದಿಯನ್ನು ಕೇಳಿದ್ದು, ಪರಿಸ್ಥಿತಿಯನ್ನು ನಿಭಾಯಿಸಲು ವಿಫಲವಾದುದಕ್ಕೆ ಖಂಡನೆಯನ್ನೂ ವ್ಯಕ್ತಪಡಿಸಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.