ಶಾಂತಿನಿಕೇತನ: ಪಶ್ಚಿಮಬಂಗಾಳದಲ್ಲಿನ ಶಾಂತಿನಿಕೇತನದ ವಿಶ್ವಭಾರತಿ ವಿಶ್ವವಿದ್ಯಾನಿಲಯದ ಆವರಣದಲ್ಲಿನ ಕುಡಿಯುವ ನೀರಿನ ಕೊರತೆಗೆ ಪ್ರಧಾನಿ, ಈ ವಿಶ್ವವಿದ್ಯಾಲಯದ ಚಾನ್ಸಲರ್ ಕೂಡ ಆಗಿರುವ ನರೇಂದ್ರ ಮೋದಿ ಕ್ಷಮೆಯಾಚನೆ ಮಾಡಿದ್ದಾರೆ.
ಪ್ರಧಾನಿಯನ್ನು ಚಾನ್ಸೆಲರ್ ಆಗಿ ಹೊಂದಿರುವ ದೇಶದ ಏಕೈಕ ಯೂನಿವರ್ಸಿಟಿ ಇದಾಗಿದೆ.
ವಿಶ್ವವಿದ್ಯಾನಿಲಯದ ಘಟಿಕೋತ್ಸವದಲ್ಲಿ ಚಾನ್ಸೆಲರ್ ಆಗಿ ಭಾಗವಹಿಸಿ ಮಾತನಾಡಿದ ಅವರು, ‘ವಿಶ್ವಭಾರತಿ ವಿಶ್ವವಿದ್ಯಾಲಯದ ಚಾನ್ಸೆಲರ್ ಆಗಿ ನಾನು ಕ್ಷಮೆಯಾಚನೆ ಮಾಡುತ್ತೇನೆ. ನಾನು ಇಲ್ಲಿಗೆ ಬಂದಾಗ ಕೆಲ ವಿದ್ಯಾರ್ಥಿಗಳು ಸಾಂಕೇತಿಕವಾಗಿ ಕುಡಿಯುವ ನೀರಿನ ಕೊರತೆಯ ಬಗ್ಗೆ ಹೇಳಿಕೊಂಡಿದ್ದಾರೆ’ ಎಂದಿದ್ದಾರೆ.
ಅನಾನುಕೂಲತೆಗಳು ಸೃಷ್ಟಿಯಾಗಿರುವುದಕ್ಕೆ ಕ್ಷಮೆಯಾಚನೆ ಮಾಡುತ್ತೇನೆ ಎಂದರು.
10 ಸಾವಿರ ಸ್ನಾತಕೋತ್ತರ ಪದವೀಧರರಿಗೆ, 1 ಸಾವಿರ ಪಿಎಚ್ಡಿ ವಿದ್ಯಾರ್ಥಿಗಳಿಗೆ ಇಂದು ಪದವಿ ಪ್ರದಾನ ಮಾಡಲಾಗುತ್ತಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.