ಚೆನ್ನೈ: ತಮಿಳುನಾಡು ಮುಖ್ಯಮಂತ್ರಿ ಜಯಲಲಿತಾ ಅವರು ಶುಕ್ರವಾರ ರಾಧಾಕೃಷ್ಣನ್ ನಗರ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಗೆ ನಾಮಪತ್ರ ಸಲ್ಲಿಸಿದ್ದಾರೆ.
ಇಲ್ಲಿ ಜೂನ್ 27ರಂದು ಉಪ ಚುನಾವಣೆಗೆ ನಡೆಯಲಿದ್ದು, ಎಐಡಿಎಂಕೆ ಪಕ್ಷದ ಅಭ್ಯರ್ಥಿಯಾಗಿ ಜಯಲಲಿತಾ ಅವರು ನಾಮಪತ್ರ ಸಲ್ಲಿಸಿದ್ದಾರೆ. ಈ ಕ್ಷೇತ್ರ ಅವರದ್ದೇ ಪಕ್ಷದ ಶಾಸಕ ಪಿ.ವೆಟ್ರಿವೇಲ್ ಅವರ ರಾಜೀನಾಮೆಯಿಂದ ತೆರವಾಗಿತ್ತು.
ಡಿಎಂಕೆ ಮತ್ತು ಪಿಎಂಕೆ, ವಿಸಿಕೆ, ಎಂಡಿಎಂಕೆ ಪಕ್ಷಗಳು ಈ ಉಪ ಚುನಾವಣೆಯನ್ನು ಬಹಿಷ್ಕರಿಸಿವೆ. ರಾಜ್ಯದ ವಿಧಾನಸಭೆ ಚುನಾವಣೆಗೆ ಇನ್ನು ಕೇವಲ ಒಂದು ವರ್ಷ ಮಾತ್ರ ಇರುವುದರಿಂದ ಈ ಉಪ ಚುನಾವಣೆಯನ್ನು ಬಹಿಷ್ಕರಿಸುವುದಾಗಿ ಈ ಪಕ್ಷಗಳು ಹೇಳಿಕೊಂಡಿವೆ.
ಶ್ರೀರಂಗಂ ಕ್ಷೇತ್ರದಿಂದ ವಿಧಾನಸಭೆಗೆ ಈ ಹಿಂದೆ ಆಯ್ಕೆಯಾಗಿದ್ದ ಜಯಾ ಅವರ ವಿರುದ್ಧ ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಬೆಂಗಳೂರಿನ ವಿಶೇಷ ನ್ಯಾಯಾಲಯ ದೋಷಿ ಎಂದು ತೀರ್ಪು ನೀಡಿ, ಜೈಲು ಶಿಕ್ಷೆ ವಿಧಿಸಿತ್ತು. ಇದರಿಂದಾಗಿ ಅವರು ತಮ್ಮ ಮುಖ್ಯಮಂತ್ರಿ ಹುದ್ದೆ ಹಾಗೂ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಬೇಕಾಗಿ ಬಂತು.
ಇದೀಗ ಹೈಕೋರ್ಟ್ ಅವರನ್ನು ನಿರ್ದೋಷಿ ಎಂದು ಹೇಳಿದೆ, ಹೀಗಾಗಿ ಅವರು ಮುಖ್ಯಮಂತ್ರಿ ಸ್ಥಾನಕ್ಕೆ ವಾಪಾಸ್ಸಾಗಿದ್ದಾರೆ. ಅಲ್ಲದೇ ಚುನಾವಣೆಗೆ ಸ್ಪರ್ಧಿಸಿ ಶಾಸಕ ಸ್ಥಾನವನ್ನು ಪಡೆಯಲು ಮುಂದಾಗಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.