ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಇಂದಿನಿಂದ ಮೂರು ದಿನಗಳ ವಿದೇಶ ಪ್ರವಾಸ ಹಮ್ಮಿಕೊಳ್ಳಲಿದ್ದಾರೆ. ಮೊದಲು ಅವರು ಇಂಡೋನೇಷ್ಯಾಗೆ ತೆರಳಲಿದ್ದು, ಬಳಿಕ ಸಿಂಗಾಪುರಕ್ಕೆ ಭೇಟಿ ಕೊಡಲಿದ್ದಾರೆ.
ಇಂಡೋನೇಷ್ಯಾದ ಅಧ್ಯಕ್ಷ ಜೋಕೊವಿಡೊಡೊ ಅವರ ಆಹ್ವಾನದ ಮೇರೆಗೆ ಮೋದಿ ಅಲ್ಲಿಗೆ ಭೇಟಿಕೊಡುತ್ತಿದ್ದಾರೆ. ಉಭಯ ನಾಯಕರು ರಕ್ಷಣಾ ಮತ್ತು ಭದ್ರತಾ, ಸಮುದ್ರ ವಿಷಯಗಳ ಬಗ್ಗೆ ಮಾತುಕತೆ ನಡೆಸಲಿದ್ದಾರೆ. ಭಾರತ-ಇಂಡೋನೇಷ್ಯಾ ಸಂಬಂಧದಲ್ಲಿ ಆರ್ಥಿಕತೆ ಮಹತ್ವದ ಪಾತ್ರ ವಹಿಸುತ್ತದೆ. 2005ರಿಂದ ಉಭಯ ದೇಶಗಳು ತಂತ್ರಗಾರಿಕಾ ಪಾಲುದಾರಿತ್ವ ಹೊಂದಿವೆ.
ಭಾರತ ಮತ್ತು ಇಂಡೋನೇಷ್ಯಾ ಪ್ರವಾಸೋದ್ಯಮವನ್ನು ಉತ್ತೇಜಿಸಿ ಆ ಮೂಲಕ ಉದ್ಯೋಗವಕಾಶವನ್ನು ಹೆಚ್ಚಿಸುವ ಹೆಬ್ಬಯಕೆಯನ್ನು ಹೊಂದಿವೆ.
ಮೇ.29ರಿಂದ ಜೂನ್ 2ರವರೆಗೆ ಮೋದಿ ವಿದೇಶ ಪ್ರವಾಸ ನಡೆಸಲಿದ್ದು, ಸಿಂಗಾಪುರಕ್ಕೂ ಭೇಟಿಕೊಡಲಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.