ನವದೆಹಲಿ: 1984ರ ಸಿಖ್ ವಿರೋಧಿ ದಂಗೆ ಪ್ರಕರಣದಲ್ಲಿ ಆರೋಪಿಯಾಗಿರುವ ಕಾಂಗ್ರೆಸ್ ನಾಯಕ ಜಗದೀಶ್ ಟೈಟ್ಲರ್ಗೆ ಕ್ಲೀನ್ಚಿಟ್ ನೀಡಿರುವ ಕುರಿತು ಮತ್ತೆ ವಿವಾದ ಹುಟ್ಟಿದ್ದು, ಸಿಖ್ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿವೆ.
ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರನ್ನು ಭೇಟಿ ಮಾಡಿದ ನಂತರ ಸಿಬಿಐನಿಂದ ಟೈಟ್ಲರ್ ಕ್ಲೀನ್ ಚಿಟ್ ಪಡೆದಿದ್ದರು ಎಂದು ಶಸ್ತ್ರಾಸ್ತ್ರ ವ್ಯಾಪಾರಿ ಅಭಿಷೇಕ್ ವರ್ಮಾ ಆರೋಪ ಮಾಡಿದ್ದಾರೆ. ಈ ಆರೋಪದ ಸತ್ಯಾಸತ್ಯತೆಯನ್ನು ಬಯಲಿಗೆಳೆಯುವಂತೆ ಆಗ್ರಹಿಸಿ ಕಳೆದ ಮೂರು ದಿನಗಳಿಂದ ಸಿಖ್ ಸಂಘಟನೆಗಳು ದೆಹಲಿಯ ಕಾಂಗ್ರೆಸ್ ಪ್ರಧಾನ ಕಚೇರಿ ಎದುರು ಪ್ರತಿಭಟನೆ ನಡೆಸುತ್ತಿದೆ.
ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಕೂಡಲೇ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಒತ್ತಾಯಿಸಿವೆ. ಟೈಟ್ಲರ್ ಪ್ರತಿಕೃತಿಯನ್ನು ದಹಿಸಿವೆ.
ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರನ್ನು ಭೇಟಿಯಾದ ಬಳಿಕ ತಮಗೆ ಈ ಪ್ರಕರಣದಲ್ಲಿ ಕ್ಲೀನ್ ಚಿಟ್ ದೊರೆಯಿತು ಎಂದು ಟೈಟ್ಲರ್ ಅವರು ಹೇಳಿದ್ದಾರೆ ಎಂದು ಅಭಿಷೇಕ್ ಹೇಳಿಕೊಂಡಿದ್ದಾರೆ. ಅವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಸಂಘಟನೆಗಳು ಆಗ್ರಹಿಸಿವೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.