ಮಂಗಳೂರು: ಮಂಗಳೂರು ನೆರೆ ಪೀಡಿತ ಪ್ರದೇಶಗಳಿಗೆ ಸಂಸದ ನಳಿನ್ ಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು .
ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ನಳಿನ್ ಕುಮಾರ್ ಕಟೀಲ್ ಜನರು ಯಾವುದೇ ಭಯ ಭೀತರಾಗುವ ಅಗತ್ಯವಿಲ್ಲ. ಯಾವುದೇ ಸಹಾಯಬೇಕಾಗಿದ್ದಲ್ಲಿ ಜಿಲ್ಲಾಡಳಿತ ಹಾಗೂ ನಮ್ಮನ್ನು ನೇರವಾಗಿ ಸಂಪರ್ಕಿಸಬಹದುಗಿದೆ. ಜಿಲ್ಲಾಡಳಿತ ಈಗಾಗಲೇ ಅಗತ್ಯ ಕ್ರಮಗಳನ್ನೂ ಕೈಗೊಂಡಿದೆ. ಸಂಭಾವ್ಯ ಅಪಾಯ ಎದುರಿಸಲು ಸನ್ನದ್ಧವಾಗಿದೆ. ಬಿಜೆಪಿ ಕಚೇರಿಯಲ್ಲೂ ಸಹಾಯವಾಣಿ ಆರಂಭಿಸಲಾಗಿದೆ. ಸಂಘನಿಕೇತನದಲ್ಲಿಯೂ ಊಟ ಹಾಗೂ ವಸತಿ ವ್ಯವಸ್ಥೆ ಮಾಡಲಾಗಿದೆ ಎಂದು ಹೇಳಿದರು. ವೈದ್ಯರ ತಂಡ ಹಾಗೂ ಆಂಬುಲೆನ್ಸ್ ಕೂಡ ಸೇವೆಗೆ ಸಿದ್ಧವಾಗಿದೆ. ಬೆಳಿಗ್ಗೆ ಪಡೀಲ್ ಸೇರಿದಂತೆ ಹೆದ್ದಾರಿಯ ಕೆಲವೆಡೆ ಸಮಸ್ಯೆ ಉಂಟಾಗಿದ್ದು ಅಲ್ಲಿಯೂ ಭೇಟಿ ನೀಡಿ ಪರಿಶೀಲನೆ ನಡೆಸಿರುವುದಾಗಿ ಹೇಳಿದರು.
ಮಂಗಳೂರು ನಗರ ಉತ್ತರ ಶಾಸಕರಾದ ಡಾ. ಭರತ್ ಶೆಟ್ಟಿ ವೈ ನೆರೆ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ, ‘ನಿರಂತರ ಮಳೆ ಸುರಿಯುತ್ತಿರುವ ಕಾರಣ ನಮ್ಮ ಪರಿಸರದಲ್ಲಿ ಸಾರ್ವಜನಿಕರಿಗೆ ತೊಂದರೆಯಾಗುತ್ತಿದೆ. ಹಲವು ತಗ್ಗು ಪ್ರದೇಶಗಳಿಗೆ ನೀರು ನುಗ್ಗಿ ತೊಂದರೆಯಾಗಿರುವುದು ನಮ್ಮ ಗಮನಕ್ಕೆ ಬಂದಿದೆ. ತೊಂದರೆಯುಂಟಾಗಿರುವ ಸ್ಥಳಗಳಲ್ಲಿ ನಮ್ಮ ಕಾರ್ಯಕರ್ತರು ಪರಿಹಾರ ಕಾರ್ಯದಲ್ಲಿ ತೊಡಗಿದ್ದು, ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ನಿರಂತರ ಸಂಪರ್ಕದಲ್ಲಿದ್ದು ಆದಷ್ಟು ಬೇಗ ಸಮಸ್ಯೆಯನ್ನು ಬಗೆಹರಿಸುವ ಪ್ರಯತ್ನವನ್ನು ಮಾಡುತ್ತಿದ್ದೇವೆ. ಸಾರ್ವಜನಿಕರು ಪರಿಸ್ಥಿಯನ್ನು ಅರ್ಥ ಮಾಡಿಕೊಂಡು ಒಟ್ಟಾಗಿ ಸಮಸ್ಯೆಯನ್ನು ಪರಿಹರಿಸಲು ಸಹಕರಿಸಬೇಕೆಂದು ವಿನಂತಿಸಿಕೊಂಡಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.