ಇಂಡೋನೇಷ್ಯಾ(ಜಕಾರ್ತಾ): ಇಂದಿನಿಂದ 3 ದೇಶಗಳ ಪ್ರವಾಸದಲ್ಲಿರುವ ಭಾರತದ ಪ್ರಧಾನಿ ನರೇಂದ್ರ ಮೋದಿ ಇಂದು ಇಂಡೋನೇಷ್ಯಾದ ಜಕಾರ್ತಾ ತಲುಪಿದರು. ಅಲ್ಲಿನ ಭಾರತೀಯ ಮೂಲದ ಜನರನ್ನು ಭೇಟಿಯಾದರು.
ಜಕಾರ್ತಾದ ಮೆರ್ಡೇಕಾ ಪ್ಯಾಲೇಸನಲ್ಲಿ ಇಂಡೋನೇಷ್ಯಾ ಅಧ್ಯಕ್ಷ ಜೋಕೋ ವಿಡೋಡೊ ಜೊತೆಗೆ ಉಭಯರಾಷ್ಟ್ರಗಳ ದ್ವಿಪಕ್ಷೀಯ ಸಂಭಂದಗಳ ಕುರಿತು ಮೋದಿ ಮಾತುಕತೆ ನಡೆಸಿದ್ದಾರೆ. ರಕ್ಷಣೆ, ವಿಜ್ಞಾನ ಮತ್ತು ತಾಂತ್ರಿಕ ಸಹಕಾರ, ರೈಲ್ವೆ ಮತ್ತು ಆರೋಗ್ಯ ಕ್ಷೇತ್ರಗಳಲ್ಲಿ ಭಾರತ-ಇಂಡೋನೇಷ್ಯಾ ನಡುವೆ 15 ಒಪ್ಪಂದಗಳಿಗೆ ಸಹಿ ಹಾಕಲಾಯಿತು. ‘ಭಯೋತ್ಪಾದನೆ ವಿರುದ್ಧದ ಹೋರಾಟದಲ್ಲಿ ಭಾರತವು ಇಂಡೋನೇಷ್ಯಾ ಜೊತೆ ದೃಢವಾಗಿ ನಿಂತಿದೆ, ಇಂಡೋನೇಷ್ಯಾದ ಇತ್ತೀಚಿನ ಭಯೋತ್ಪಾದಕ ದಾಳಿಯನ್ನು ನಾವು ಖಂಡಿಸುತ್ತೇವೆ, ಇದರಲ್ಲಿ ಅನೇಕ ಮುಗ್ಧ ಜನರು ತಮ್ಮ ಪ್ರಾಣ ಕಳೆದುಕೊಂಡಿದ್ದಾರೆ’ ಎಂದು ಮೋದಿ ಹೇಳಿದ್ದಾರೆ.
ಇಂಡೋ-ಪೆಸಿಫಿಕ್ ಪ್ರದೇಶದ ಅಭಿವೃದ್ಧಿಗಾಗಿ ನಾವು(ಭಾರತ-ಇಂಡೋನೇಷ್ಯಾ) ಸಮಾನ ದೃಷ್ಟಿಕೋನವನ್ನು ಹೊಂದಿದ್ದೇವೆ. ಭಾರತ-ಅಸಿಯಾನ್ ಸಹಭಾಗಿತ್ವವು ಪ್ರಮುಖ ಶಕ್ತಿಯಾಗಿದ್ದು, ಇದು ಇಂಡೋ-ಪೆಸಿಫಿಕ್ ಪ್ರದೇಶದಲ್ಲಿ ಶಾಂತಿ ನೆಲೆಸುವ ಭರವಸೆ ಮೂಡಿಸಿದೆ ಎಂದು ಜಕಾರ್ತಾದಲ್ಲಿ ಪ್ರಧಾನಿ ಮೋದಿ ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.