ನವದೆಹಲಿ: ಪ್ರಧಾನಿ ನರೇಂದ್ರ ಎರಡು ದಿನಗಳ ಪ್ರವಾಸಕ್ಕಾಗಿ ಬಾಂಗ್ಲಾದೇಶಕ್ಕೆ ತೆರಳಿದ್ದಾರೆ. ಶನಿವಾರ ಬೆಳಿಗ್ಗೆ ಢಾಕಾ ವಿಮಾನ ನಿಲ್ದಾಣಕ್ಕೆ ಬಂದಿಳಿದ ಅವರನ್ನು ಬಾಂಗ್ಲಾ ಪ್ರಧಾನಿ ಶೇಕ್ ಹಸೀನಾ ಬರಮಾಡಿಕೊಂಡರು.
ಮೋದಿಗೆ ಸ್ವಾಗತ ಕೋರುವ ದೊಡ್ಡ ದೊಡ್ಡ ಬ್ಯಾನರ್ಗಳನ್ನು, ಮೋದಿ ಕಟೌಟ್ಗಳನ್ನು ಢಾಕಾದಲ್ಲಿ ಹಾಕಲಾಗಿದೆ. ಮೋದಿಗೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯವರೂ ಸಾಥ್ ನೀಡಿದ್ದಾರೆ.
ಈ ಪ್ರವಾಸದ ಬಗ್ಗೆ ಟ್ವೀಟ್ ಮಾಡಿರುವ ಮೋದಿ, ‘ಬಾಂಗ್ಲಾದೇಶಕ್ಕೆ ತೆರಳುತ್ತಿದ್ದೇನೆ. ಈ ಭೇಟಿ ಉಭಯ ದೇಶಗಳ ನಡುವಣ ಬಾಂಧವ್ಯವನ್ನು ಗಟ್ಟಿಗೊಳಿಸಲಿದೆ. ಇದರಿಂದ ನಮ್ಮ ಪ್ರದೇಶದ ಜನರಿಗೆ ಪ್ರಯೋಜನಕಾರಿಯಾಗಲಿದೆ’ ಎಂದಿದ್ದಾರೆ.
ಈ ಪ್ರವಾಸದ ವೇಳೆ ಬಾಂಗ್ಲಾ ಮತ್ತು ಭಾರತದ ನಡುವೆ ಹಲವಾರು ಒಪ್ಪಂದಗಳಿಗೆ ಸಹಿ ಬೀಳುವ ಸಾಧ್ಯತೆ ಇದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.