News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಭಯೋತ್ಪಾದನೆಯನ್ನು ಪ್ರೋತ್ಸಾಹಿಸುತ್ತಿದ್ದ 48 ಮದರಸಾಗಳ ವಿರುದ್ಧ ಶಿಸ್ತುಕ್ರಮ

madrassa-in-pakistan1

ಇಸ್ಲಾಮಾಬಾದ್ : ಭಯೋತ್ಪಾದನ ಚಟುವಟಿಕೆಗಳಿಗೆ ಪ್ರೋತ್ಸಾಹ ನೀಡುತ್ತಿದ್ದ 48 ಮದರಸಾಗಳ ವಿರುದ್ಧ ಕಠಿಣ ಕ್ರಮವನ್ನು ಕೈಗೊಳ್ಳಲು ಪಾಕಿಸ್ಥಾನ ಮುಂದಾಗಿದೆ.

ಪಾಕಿಸ್ಥಾನದ ಸಿಂಧ್ ಪ್ರಾಂತ್ಯದ ಮುಖ್ಯಮಂತ್ರಿ ಖಯಾಮ್ ಅಲಿಷಾ ನೇತೃತ್ವದಲ್ಲಿ ಉನ್ನತ ಮಟ್ಟದ ಸಭೆಯಲ್ಲಿ, ಭಯೋತ್ಪಾದನೆಯನ್ನು ಪ್ರೋತ್ಸಾಹಿಸುತ್ತಿದ್ದ 48 ಮದರಸಾಗಳ ವಿರುದ್ಧ ಶಿಸ್ತುಕ್ರಮ ಕೈಗೊಳ್ಳಲು ತಿರ್ಮಾನಿಸಲಾಗಿದೆ.

ಈ ಮದರಸಾಗಳು ಭಯೋತ್ಪಾದಕ ಕೃತ್ಯಗಳನ್ನು ಪ್ರೋತ್ಸಾಹಿಸುತ್ತಿದ್ದವು ಮತ್ತು ಉಗ್ರರ ಕುಕೃತ್ಯಗಳಿಗೆ ಬೆಂಬಲ ನೀಡುತ್ತಿದ್ದವು ಎಂದು ಹೇಳಲಾಗಿದೆ.

ಅಲ್ಲದೇ ಉಗ್ರರನ್ನು ಪ್ರೋತ್ಸಾಹಿಸುವ ಮದರಸಾಗಳಿಗೆ ಹರಿದು ಬರುವ ಹಣದ ಮೂಲವನ್ನು ಪತ್ತೆಹಚ್ಚಲು ಮತ್ತು ಅವರ ಚಲನವಲನಗಳನ್ನು ಗಮನಿಸಲು ಕ್ರೀಯಾಪಡೆ ರಚಿಸಿಲಾಗಿದೆ ಎಂದು ಅಲ್ಲಿನ ವಾರ್ತಾ ಸಚಿವ ಶರ್ಜಿಲ್ ಇನಾಮ್ ಮೆಮೋನ್ ಪತ್ರಕರ್ತರಿಗೆ ತಿಳಿಸಿದ್ದಾರೆ.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top