ಮಂಗಳೂರು : ಸರಕಾರಿ ಪದವಿ ಪೂರ್ವ ಕಾಲೇಜು ಹಾಗೂ ಪದವಿ ಕಾಲೇಜುಗಳ ಆಭಿವೃದ್ದಿ ಹಾಗೂ ಅದಕ್ಕೆ ಪೂರಕವಾಗುವಂತೆ ಸ್ಟಾಫ್ ಕೌನ್ಸಿಲ್ ಸಮಿತಿಗಳನ್ನು ರಚಿಸುವ ಬಗ್ಗೆ ಗಮನ ನೀಡುವುದಾಗಿ ಮಂಗಳೂರು ದಕ್ಷಿಣ ಕ್ಷೇತ್ರ ಶಾಸಕ ಡಿ. ವೇದವ್ಯಾಸ ಕಾಮತ್ ಇಂದಿಲ್ಲಿ ಹೇಳಿದ್ದಾರೆ.
ನಗರದ ಕೊಡಿಯಾಲ್ಬೈಲ್ನಲ್ಲಿರುವ ಅಟಲ್ ಸೇವಾ ಕೇಂದ್ರದಲ್ಲಿ ಸಾರ್ವಜನಿಕ ಅಹವಾಲು ಸ್ವೀಕಾರ ಸಂದರ್ಭದಲ್ಲಿ ತಮ್ಮನ್ನು ಭೇಟಿ ಮಾಡಿದ ಕಾಲೇಜು ಮುಖ್ಯಸ್ಥರು, ಶಿಕ್ಷಣಾಧಿಕಾರಿಗಳಿಗೆ ಈ ಬಗ್ಗೆ ಭರವಸೆ ನೀಡಿದರು. ನಗರದಲ್ಲಿರುವ ಸರಕಾರಿ ಪದವಿ ಕಾಲೇಜು ಹಾಗೂ ಪದವಿ ಕಾಲೇಜುಗಳನ್ನು ಮಾದರಿ ಶಿಕ್ಷಣ ಸಂಸ್ಥೆಗಳನ್ನಾಗಿ ರೂಪಿಸುವ ನಿಟ್ಟಿನಲ್ಲೂ ಚಿಂತಿಸುವಂತೆ ಶಾಸಕರು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಬೆಳಗ್ಗೆಯಿಂದಲೇ ನೂರಾರು ಸಂಖ್ಯೆಯಲ್ಲಿ ಅಹವಾಲುಗಳನ್ನು ಸ್ವೀಕರಿಸಿದ ಶಾಸಕರು ಹಲವಾರು ಸಮಸ್ಯೆಗಳಿಗೆ ಸ್ಥಳದಲ್ಲೇ ಅಧಿಕಾರಿಗಳನ್ನು ಸಂಪರ್ಕಿಸಿ ಕ್ರಮ ಜರಗಿಸುವಂತೆ ಆದೇಶ ನೀಡಿದರು.
ನಗರದಲ್ಲಿ ಮಂಗಳವಾರ ಸುರಿದ ಮಳೆಯಿಂದಾಗಿ ಹಾನಿಗೊಳಗಾದ ಪ್ರದೇಶದ ಸಂತ್ರಸ್ತರು ಪರಿಹಾರ ಒದಗಿಸಿಕೊಡುವಂತೆ ಮನವಿಯನ್ನು ಶಾಸಕರಿಗೆ ಸಲ್ಲಿಸಿದರು. ಮನೆಯಿಂದ ಹಾನಿಯಿಂದ ನಷ್ಟ ಅನುಭವಿಸುತ್ತಿರುವ ಎಲ್ಲ ಜನರಿಗೂ ನೆರವಾಗುವುದು ಸರಕಾರದ ಕರ್ತವ್ಯ. ಈ ಬಗ್ಗೆ ತಕ್ಷಣದಲ್ಲಿ ಕ್ರಮ ಜರಗಿಸುವಂತೆ ಈಗಾಗಲೇ ಪಾಲಿಕೆ ಹಾಗೂ ಜಿಲ್ಲಾಡಳಿತಕ್ಕೆ ಸೂಚಿಸಲಾಗಿದೆ ಎಂದು ಹೇಳಿದರು.
ನಗರದಲ್ಲಿ ರಿಕ್ಷಾ ಪಾರ್ಕಿಂಗ್ ಹಾಗೂ ಪರ್ಮಿಟ್ ನೀಡುವ ಬಗ್ಗೆ ಸಾರಿಗೆ ಕಚೇರಿಯಲ್ಲಿ ಅವ್ಯವಹಾರ ನಡೆಯುತ್ತಿದ್ದು, ಕಾನೂನು ಉಲ್ಲಂಘನೆಯಾಗುತ್ತಿದೆ ಎಂದು ಅಟೋ ಚಾಲಕರು, ಮಾಲಿಕರ ನಿಯೋಗವೊಂದು ಶಾಸಕರಿಗೆ ಮನವಿ ಸಲ್ಲಿಸಿತು. ಈ ವಿಚಾರದಲ್ಲಿ ಸೂಕ್ತ ಗಮನ ಹರಿಸಿ, ಸಮಸ್ಯೆಯನ್ನು ಶೀಘ್ರದಲ್ಲಿ ಪರಿಹರಿಸುವಂತೆ ಕಾಮತ್ ಅವರು ಸಾರಿಗೆ ಅಧಿಕಾರಿಗಳಿಗೆ ಸೂಚಿಸಿದರು.
ಅಂಗವಿಕಲರು, ನಿರೋದ್ಯೋಗಿಗಳು ಉದ್ಯೋಗ ಸಂಬಂಧಿ ಅರ್ಜಿಗಳನ್ನು ಶಾಸಕರಿಗೆ ಸಲ್ಲಿಸಿದರು. ಇದಲ್ಲದೆ ರಸ್ತೆ ದುರಸ್ತಿ, ಒಳಚರಂಡಿ ಅವ್ಯವಸ್ಥೆ, ಸ್ವಚ್ಚತೆ ಮುಂತಾದ ದೂರುಗಳು ಕೂಡಾ ಸಲ್ಲಿಕೆಯಾದವು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.