ನವದೆಹಲಿ: ಸಿಬಿಎಸ್ಇ 2018ನೇ ಸಾಲಿನ ನೀಟ್ (National Eligibility cum Entrance Test ) ಪರೀಕ್ಷೆಯ ಫಲಿತಾಂಶವನ್ನು ತನ್ನ ಅಧಿಕೃತ ವೆಬ್ಸೈಟ್ನಲ್ಲಿ ಸೋಮವಾರ ಪ್ರಕಟಗೊಳಿಸಿದೆ. ಶೇ.99.99ರಷ್ಟು ಅಂಕ ಗಳಿಸುವ ಮೂಲಕ ಬಿಹಾರದ ಕಲ್ಪನಾ ಕುಮಾರಿ ದೇಶಕ್ಕೆ ಪ್ರಥಮ ಸ್ಥಾನ ಪಡೆದುಕೊಂಡಿದ್ದಾರೆ.
cbseresults.nic.in, cbseneet.nic.in. ವೆಬ್ಸೈಟ್ನಲ್ಲಿ ಅಭ್ಯರ್ಥಿಗಳು ತಮ್ಮ ಫಲಿತಾಂಶವನ್ನು ನೋಡಬಹುದಾಗಿದೆ. ಅಲ್ಲದೇ ತಮ್ಮ ಅಂಕಗಳನ್ನು www.mohfw.nic.in, www.mcc.nic.in. ವೆಬ್ಸೈಟ್ನಲ್ಲಿ ಪರಿಶೀಲನೆ ಮಾಡಿಕೊಳ್ಳಬಹುದು.
ಸಿಬಿಎಸ್ಇ ನೀಟ್ 2018ನ ಫಲಿತಾಂಶವನ್ನು ಡೌನ್ಲೋಡ್ ಮಾಡಿ ಭವಿಷ್ಯದ ಅಗತ್ಯಗಳಿಗಾಗಿ ಪ್ರಿಂಟ್ ಔಟ್ ತೆಗೆದಿಟ್ಟುಕೊಳ್ಳುವಂತೆ ಸೂಚಿಸಲಾಗಿದೆ.
ಒಟ್ಟು 13 ಲಕ್ಷ ಮಂದಿ ನೀಟ್ ಪರೀಕ್ಷೆಯನ್ನು ಬರೆದಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.