ಮಂಗಳೂರು : ಅವಕಾಶ ಇದ್ದ ಕಡೆ ಗಿಡಗಳನ್ನು ನೆಡುವುದರಿಂದ ಪರಿಸರದ ಉಳಿವಿಗೆ ಸೇವೆ ಸಲ್ಲಿಸಬಹುದು ಎಂದು ಮಂಗಳೂರು ನಗರ ದಕ್ಷಿಣದ ಶಾಸಕ ಡಿ. ವೇದವ್ಯಾಸ ಕಾಮತ್ ಹೇಳಿದರು.
ಅವರು ಮಂಗಳೂರಿನ ಕದ್ರಿ ಉದ್ಯಾನವನದಲ್ಲಿ ಪ್ರಜಾವಾಣಿ-ಡೆಕ್ಕನ್ ಹೆರಾಲ್ಡ್ ಪತ್ರಿಕೆ ಜಂಟಿಯಾಗಿ ಹಮ್ಮಿಕೊಂಡಿದ್ದ ವಿಶ್ವ ಪರಿಸರ ದಿನದ ಅಂಗವಾಗಿ ಗಿಡಗಳನ್ನು ನೆಟ್ಟು ಮಾತನಾಡಿದರು. ದಕ್ಷಿಣ ಕನ್ನಡ ಜಿಲ್ಲಾಡಳಿತ, ಮಂಗಳೂರು ಮಹಾನಗರ ಪಾಲಿಕೆ ಈಗಾಗಲೇ ಪರಿಸರವನ್ನು ಉಳಿಸುವ ನಿಟ್ಟಿನಲ್ಲಿ ಕಾರ್ಯಕ್ರಮ ಹಮ್ಮಿಕೊಂಡಿದೆ. ಮಾಧ್ಯಮ ರಂಗದ ಹೆಸರಾಂತ ಪತ್ರಿಕೆಗಳಾದ ಪ್ರಜಾವಾಣಿ ಮತ್ತು ಡೆಕ್ಕನ್ ಹೆರಾಲ್ಡ್ ಪತ್ರಿಕೆಗಳು ಇಂತಹ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದು ಶ್ಲಾಘನೀಯ. ಮಂಗಳೂರಿನ ಜನರು ಮರಗಿಡಗಳನ್ನು ಉಳಿಸಿ ಬೆಳೆಸುವ ಮೂಲಕ ಮುಂದಿನ ಪೀಳಿಗೆಗೆ ಪರಿಸರವನ್ನು ಸುರಕ್ಷಿತವಾಗಿ ಹಸ್ತಾಂತರಿಸುವ ಕೆಲಸ ಮಾಡಬೇಕಿದೆ ಎಂದು ಶಾಸಕ ವೇದವ್ಯಾಸ ಕಾಮತ್ ಹೇಳಿದರು.
ಮೇಯರ್ ಭಾಸ್ಕರ್ ಮೊಯಿಲಿ, ಪಾಲಿಕೆಯ ವಿಪಕ್ಷ ನಾಯಕ ಪ್ರೇಮಾನಂದ ಶೆಟ್ಟಿ, ಸ್ಥಳೀಯ ಪಾಲಿಕೆ ಸದಸ್ಯೆ ರೂಪಾ ಡಿ ಬಂಗೇರ, ಫಾರೆಸ್ಟ್ ರೇಂಜರ್ ಶ್ರೀಧರ್, ಪ್ರೆಸ್ ಕ್ಲಬ್ ಅಧ್ಯಕ್ಷ ರೋನಿ ಫೆರ್ನಾಂಡಿಸ್ ಮುಂತಾದವರು ಉಪಸ್ಥಿತರಿದ್ದರು
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.