ಶ್ರೀನಗರ: ಜಮ್ಮು ಕಾಶ್ಮೀರದ ಮಚ್ಚಿಲ್ ಸೆಕ್ಟರ್ನ ವಾಸ್ತವ ಗಡಿ ರೇಖೆಯ ಸಮೀಪ ಭಾರತೀಯ ಸೇನಾಪಡೆ ಅಕ್ರಮ ಒಳನುಸುಳುವಿಕೆಯ ಪ್ರಯತ್ನವನ್ನು ವಿಫಲಗೊಳಿಸಿದ್ದು, 3 ಉಗ್ರರನ್ನು ಹತ್ಯೆ ಮಾಡಿದೆ.
ಮಚ್ಚಿಲ್ ಸೆಕ್ಟರ್ನಲ್ಲಿ ಉಗ್ರರ ಸಂಶಯಾಸ್ಪದ ಚಲನವಲನದ ಬಗ್ಗೆ ಪತ್ತೆ ಮಾಡಿದ ಸೇನಾ ಪಡೆ, ಕಾರ್ಯಾಚರಣೆ ನಡೆಸಿ ಒಳನುಸುಳುವಿಕೆಯನ್ನು ತಡೆಗಟ್ಟಿದೆ. ಈ ವೇಳೆ ನಡೆದ ಗುಂಡಿನ ಚಕಮಕಿಯಲ್ಲಿ ಮೂವರು ಉಗ್ರರು ಹತರಾಗಿದ್ದಾರೆ.
ಪ್ರಸ್ತುತ ಈ ಪ್ರದೇಶದಲ್ಲಿ ಶೋಧ ಕಾರ್ಯ ಮುಂದುವರೆದಿದೆ ಎಂದು ಮೂಲಗಳು ಸ್ಪಷ್ಟಪಡಿಸಿವೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.