ನವದೆಹಲಿ: ಸುನಂದಾ ಪುಷ್ಕರ್ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ನ್ಯಾಯಾಲಯ ಕಾಂಗ್ರೆಸ್ ಮುಖಂಡ ಹಾಗೂ ಆಕೆಯ ಪತಿ ಶಶಿ ತರೂರ್ ಅವರಿಗೆ ಸಮನ್ಸ್ ಜಾರಿಗೊಳಿಸಿದ್ದು, ಜುಲೈ 7ಕ್ಕೆ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದೆ.
ದೆಹಲಿ ಪೊಲೀಸರು ಸಲ್ಲಿಕೆ ಮಾಡಿದ ಚಾರ್ಜ್ಶೀಟ್ ಸಂಬಂಧ ಸಮನ್ಸ್ ಜಾರಿಗೊಳಿಸುತ್ತಿರುವುದಾಗಿ ಹೆಚ್ಚುವರಿ ಮುಖ್ಯ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ಸಮರ್ ವಿಶಾಲ್ ಹೇಳಿದ್ದಾರೆ.
‘ಪೊಲೀಸರು ಸಲ್ಲಿಸಿದ ಜಾರ್ಜ್ಶೀಟ್ ಹಿನ್ನಲೆಯಲ್ಲಿ ಭಾರತೀಯ ದಂಡ ಸಂಹಿತೆ 306 ಆತ್ಮಹತ್ಯೆಗೆ ಪ್ರೇರಣೆ, ಸೆಕ್ಷನ್ 498ಎ ಸುನಂದ ಪುಷ್ಕರ್ ಅವರೊಂದಿಗೆ ಕ್ರೂರವಾಗಿ ನಡೆದುಕೊಂಡ ಬಗ್ಗೆ ತರೂರ್ ಅವರಿಗೆ ಸಮನ್ಸ್ ಜಾರಿ ಮಾಡಿದ್ದೇನೆ’ ಎಂದಿದ್ದಾರೆ.
ಪುಷ್ಕರ್ ಅವರು ಸಾವಿಗೂ ಮುನ್ನ ಪತಿ ತರೂರ್ ಅವರಿಗೆ ಕಳುಹಿಸಿದ ಇ-ಮೇಲ್ಗಳಿಂದ ಅವರ ಸಾವಿಗೆ ತರೂರ್ ಅವರೇ ಕಾರಣ ಎಂಬ ಬಲವಾದ ಶಂಕೆ ಮೂಡಿದೆ ಎನ್ನಲಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.