ನವದೆಹಲಿ: ಈ ಬಾರಿಯ ಅಮರನಾಥ ಯಾತ್ರಿಕರ ವಾಹನಗಳಲ್ಲಿ ಭದ್ರತೆಯ ದೃಷ್ಟಿಯಿಂದ ರೇಡಿಯೋ-ಫ್ರಿಕ್ವೆನ್ಸಿ ಐಡೆಂಟಿಫಿಕೇಶನ್(ಆರ್ಎಫ್ಐಡಿ) ಟ್ಯಾಗ್ಗಳನ್ನು ಅಳವಡಿಸಲು ಸರ್ಕಾರ ನಿರ್ಧರಿಸಿದೆ.
ಸಿಆರ್ಪಿಎಫ್, ಜಮ್ಮು ಕಾಶ್ಮೀರ ಪೊಲೀಸ್ ಇಲಾಖೆ, ಶ್ರೀ ಅಮರನಾಥ ದೇಗುಲ ಮಂಡಳಿ ಈ ಡಿವೈಸ್ ಅಳವಡಿಕೆಯ ಬಗ್ಗೆ ಈಗಾಗಲೇ ಪರೀಕ್ಷಾರ್ಥ ಪ್ರಯೋಗಗಳನ್ನು ನಡೆಸಿದೆ.
ರೇಡಿಯೋ-ಫ್ರಿಕ್ವೆನ್ಸಿ ಐಡೆಂಟಿಫಿಕೇಶನ್ ಟ್ಯಾಗ್, ರೇಡಿಯೋ ತರಂಗಗಳನ್ನು ಬಳಸಿ ಟ್ಯಾಗ್ನೊಳಗೆ ಸಂಗ್ರಹಗೊಂಡಿರುವ ವಾಹನದ ಮಾಹಿತಿಯನ್ನು ಓದುತ್ತದೆ ಮತ್ತು ಸೆರೆಹಿಡಿಯುತ್ತದೆ.
ಈ ವರ್ಷ ಕೇವಲ ಪ್ರಾಯೋಗಿಕವಾಗಿ ಇದನ್ನು ಜಾರಿಗೆ ತರಲಾಗುತ್ತಿದೆ, ಮುಂದಿನ ವರ್ಷದಿಂದ ಅಮರನಾಥ ಯಾತ್ರೆಯ ಎಲ್ಲಾ ವಾಹನಗಳಿಗೂ ಕಡ್ಡಾಯವಾಗಿ ಇದನ್ನು ಬಳಸಲಾಗುತ್ತದೆ ಎಂದು ಸಿಆರ್ಪಿಎಫ್ ತಿಳಿಸಿದೆ.
ಕಳೆದ ವರ್ಷವೂ ಅಮರನಾಥ ಯಾತ್ರಿಕರ ಬಸ್ ಮೇಲೆ ಉಗ್ರರ ದಾಳಿ ನಡೆದಿತ್ತು. ಇದರಿಂದ 8 ಮಂದಿ ಹತರಾಗಿದ್ದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.