ಮಂಗಳೂರು : ವಿಶ್ವ ಹಿಂದು ಪರಿಷತ್ ಬಜರಂಗದಳ ನಂದಿನಿ ಶಾಖೆ ಕುಲಶೇಖರ ಇದರ ವತಿಯಿಂದ ಕೆ.ಎಂ.ಸಿ ಆಸ್ಪತ್ರೆ ಮತ್ತು ಎ.ಜೆ ಆಸ್ಪತ್ರೆಯ ಸಹಭಾಗಿತ್ವದಲ್ಲಿ ನಡೆದ ರಕ್ತದಾನ ಶಿಬಿರ ಹಾಗೂ ಆರೋಗ್ಯ ತಪಾಸಣಾ ಕಾರ್ಯಕ್ರಮದಲ್ಲಿ ಶಾಸಕ ವೇದವ್ಯಾಸ್ ಕಾಮತ್ ಅವರು ಭಾಗವಹಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು ರಕ್ತದಾನವೆನ್ನುವುದು ಜಗತ್ತಿನ ಅತ್ಯಂತ ಶ್ರೇಷ್ಠ ದಾನ, ತಮ್ಮ ದೇಹದ ರಕ್ತದಿಂದ ಮತ್ತೊಂದು ಜೀವ ಉಳಿಸುವ ಮಹಾದಾನ ಎಂದರು.
ಈ ಸಂದರ್ಭದಲ್ಲಿ ವಸಂತ್ ಜೆ ಪೂಜಾರಿ,ಭಾಸ್ಕರ ಚಂದ್ರ ಶೆಟ್ಟಿ, ಅಜಯ್ ಮತ್ತು ವಿಶ್ವ ಹಿಂದು ಪರಿಷತ್, ಬಜರಂಗದಳ ಮುಖಂಡರು ಮತ್ತು ನೂರಾರು ಕಾರ್ಯಕರ್ತರು ಉಪಸ್ಥಿತರಿದ್ದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.