ಬದಿಯಡ್ಕ: ನೈಸರ್ಗಿಕ ಸಂಪತ್ತು ಹಾಗೂ ಪರಿಸರ ಸಂರಕ್ಷಣೆ ನಮ್ಮೆಲ್ಲರ ಕರ್ತವ್ಯವಾಗಿದೆ. ಇದು ಒಂದು ದಿನಕ್ಕೆ ಸೀಮಿತವಾಗದೆ ನಿತ್ಯ ಜೀವನದಲ್ಲಿ ಅಳವಡಿಸಿಕೊಳ್ಳಬೇಕೆಂದು ಬದಿಯಡ್ಕ ಗ್ರಾಮ ಪಂಚಾಯತ್ ಸದಸ್ಯ ಮಹೇಶ್ ವಳಕುಂಜ ಹೇಳಿದರು.
ಅವರು ಪಟ್ಟಾಜೆ ವಾರ್ಡ್ ಮಟ್ಟದ ಪರಿಸರ ದಿನಾಚರಣೆಯನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು. ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಕದಂಬ ವೃಕ್ಷದ ಸಸಿಯನ್ನು ತನ್ನ ನಿವಾಸದ ಸಮೀಪದಲ್ಲಿ ನೆಡುವ ಮೂಲಕ ಜನರಲ್ಲಿ ಪರಿಸರ ಜಾಗೃತಿಯನ್ನು ಮೂಡಿಸಿದ್ದಾರೆ. ಶುದ್ದವಾದ ಗಾಳಿಯ ಕೊರತೆ ಜೀವಿಗಳ ಮೇಲೆ ಪ್ರತಿಕೂಲ ಪರಿಣಾಮವನ್ನು ಬೀರುತ್ತಿದೆ. ಆದುದರಿಂದ ಮನೆಗೊಂದು ಗಿಡವನ್ನು ನೆಡುವ ಮೂಲಕ ಪರಿಸರ ಸಂರಕ್ಷಣೆಗೆ ಕೈ ಜೋಡಿಸಬೇಕೆಂದು ಅವರು ಕರೆ ನೀಡಿದರು.
ಕಮಲ ಪಟ್ಟಾಜೆ ಅಧ್ಯಕ್ಷತೆ ವಹಿಸಿದ್ದರು. ಆಶಾ ಕಾರ್ಯಕರ್ತೆ ನಳಿನಿ ಪಟ್ಟಾಜೆ, ರಾಮ ಪಟ್ಟಾಜೆ, ಐತ್ತಪ್ಪ ಪಟ್ಟಾಜೆ ಮೊದಲಾದವರು ಉಪಸ್ಥಿತರಿದ್ದರು. ಲೀಲ ಪಟ್ಟಾಜೆ ಸ್ವಾಗತಿಸಿ ವೇದಾವತಿ ಚುಕ್ಕಿನಡ್ಕ ವಂದಿಸಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.