ಬೆಂಗಳೂರು: ರಾಜ್ಯದಲ್ಲಿರುವ ಹಲವು ಏಕ ಶಿಕ್ಷಕ ಶಾಲೆಗಳನ್ನು ವಿಲೀನಗೊಳಿಸಲು ಪ್ರಾಥಮಿಕ ಮತ್ತು ಮಾಧ್ಯಮಿಕ ಶಿಕ್ಷಣ ಇಲಾಖೆ ನಿರ್ಧರಿಸಿದೆ. ರಾಜ್ಯದಲ್ಲಿ ಒಟ್ಟು 3,450 ಏಕ ಶಿಕ್ಷಕ ಶಾಲೆಗಳಿವೆ. ಇಲ್ಲಿ ವಿದ್ಯಾರ್ಥಿಗಳ ಸಂಖ್ಯೆಯೂ ಕಡಿಮೆಯಿದೆ.
ಶಿಕ್ಷಣ ಇಲಾಖೆ ಅಧಿಕಾರಿಗಳಿಗಳೊಂದಿಗೆ ಸಭೆ ನಡೆಸಿದ ಪ್ರಾಥಮಿಕ ಶಿಕ್ಷಣ ಸಚಿವ ಎನ್.ಮಹೇಶ್ ಅವರು, ಏಕ ಶಿಕ್ಷಕ ಶಾಲೆಗಳನ್ನು ಸಮೀಪದಲ್ಲಿನ ಮತ್ತೊಂದು ಶಾಲೆಯೊಂದಿಗೆ ವಿಲೀನಗೊಳಿಸುತ್ತೇವೆ. ವಿದ್ಯಾರ್ಥಿಗಳ ಉತ್ತಮ ಶಿಕ್ಷಣಕ್ಕಾಗಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದಿದ್ದಾರೆ.
ರಾಜ್ಯದಲ್ಲಿ 21,225 ಪ್ರಾಥಮಿಕ ಶಾಲೆಗಳ ಪೈಕಿ 3,372 ಶಾಲೆಗಳಲ್ಲಿ ಏಕ ಶಿಕ್ಷಕರಿದ್ದಾರೆ. 11,487 ಮಾಧ್ಯಮಿಕ ಶಾಲೆಗಳ ಪೈಕಿ 78 ಶಾಲೆಗಳಲ್ಲಿ ಏಕ ಶಿಕ್ಷಕರಿದ್ದಾರೆ. ಒಟ್ಟಾರೆಯಾಗಿ ರಾಜ್ಯದ ಶೇ.7.89ರಷ್ಟು ಶಾಲೆಗಳು ಏಕ ಶಿಕ್ಷಕರನ್ನು ಹೊಂದಿದೆ ಎಂದಿದ್ದಾರೆ.
ಶೀಘ್ರದಲ್ಲೇ ಏಕ ಶಿಕ್ಷಕ ಶಾಲೆಗಳನ್ನು ಸಮೀಪದ ಶಾಲೆಗಳೊಂದಿಗೆ ವಿಲೀನಗೊಳಿಸುವ ಪ್ರಕ್ರಿಯೆ ಆರಂಭಗೊಳ್ಳಲಿದೆ ಎಂದಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.