ಬೆಂಗಳೂರು: ಭಾರತ ಶೀಘ್ರದಲ್ಲೇ ಲೀಥಿಯಂ ಅಯಾನ್ ಬ್ಯಾಟರಿಗಳ ಉತ್ಪಾದನೆಯನ್ನು ಆರಂಭಿಸಲಿದೆ.
ಭಾರತದ ಮೊತ್ತ ಮೊದಲ ಲೀಥಿಯಂ ಅಯಾನ್ ಬ್ಯಾಟರಿ ಪ್ರಾಜೆಕ್ಟ್ಗೆ ತಂತ್ರಜ್ಞಾನ ವರ್ಗಾಯಿಸುವ ಸಲುವಾಗಿ ತಮಿಳುನಾಡು ಸಿಎಸ್ಐಆರ್ನ ಸೆಂಟ್ರಲ್ ಎಲೆಕ್ಟ್ರೋ ಕೆಮಿಕಲ್ ರಿಸರ್ಚ್ ಇನ್ಸ್ಟಿಟ್ಯೂಟ್ ಮತ್ತು ಆರ್ಎಎಎಸ್ಐ ಸೋಲಾರ್ ಪವರ್ ಪ್ರೈ.ಲಿ ನಡುವೆ ಒಪ್ಪಂದಕ್ಕೆ ಸಹಿ ಬಿದ್ದಿದೆ.
‘ಪ್ರಸ್ತುತ ಭಾರತ ಲೀಥಿಯಂ ಅಯಾನ್ ಬ್ಯಾಟರಿಗಳ ಆಮದಿಗಾಗಿ ಚೀನಾ, ಜಪಾನ್, ದಕ್ಷಿಣ ಕೊರಿಯಾಗಳನ್ನು ಅವಲಂಬಿಸಿದೆ. 2017ರಲ್ಲಿ ಸುಮಾರು 150 ಮಿಲಿಯನ್ ಡಾಲರ್ ಮೊತ್ತದ ಬ್ಯಾಟರಿಗಳನ್ನು ಆಮದು ಮಾಡಿಕೊಳ್ಳಲಾಗಿದ್ದು, ವಿಶ್ವದ ಅತೀದೊಡ್ಡ ಆಮದು ರಾಷ್ಟ್ರವಾಗಿ ಭಾರತ ಹೊರಹೊಮ್ಮಿದೆ’ ಎಂದು ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವಾಲಯ ತಿಳಿಸಿದೆ.
ಪ್ರಧಾನಿಯವರ ‘ಮೇಕ್ ಇನ್ ಇಂಡಿಯಾ’ ಕನಸಿನಂತೆ ಭಾರತವನ್ನು ಉತ್ಪಾದಕ ಹಬ್ನ್ನಾಗಿ ಪರಿವರ್ತಿಸುವ ಆಶಯದೊಂದಿಗೆ ಭಾರತದಲ್ಲೇ ಲೀಥಿಯಂ ಅಯಾನ್ ಬ್ಯಾಟರಿಗಳ ಉತ್ಪಾದನಾ ಕಾರ್ಯವನ್ನು ಆರಂಭಿಸಲಾಗುತ್ತಿದೆ ಎಂದು ಸಚಿವ ಡಾ.ಹರ್ಷವರ್ಧನ್ ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.