ನವದೆಹಲಿ: 2019ರ ಲೋಕಸಭಾ ಚುನಾವಣೆಗೆ ಸಜ್ಜಾಗುತ್ತಿರುವ ಬಿಜೆಪಿ, ಇದಕ್ಕಾಗಿ 2 ಲಕ್ಷ ಪರಿಣಿತ ಸೋಶಲ್ ಮೀಡಿಯಾ ತಜ್ಞರನ್ನು ನೇಮಿಸಿಕೊಳ್ಳುತ್ತಿದೆ. ಮುಂದಿನ ಮೂರು ತಿಂಗಳಲ್ಲಿ ನೇಮಕಾತಿ ನಡೆಯಲಿದೆ ಎನ್ನಲಾಗಿದೆ.
ಇತ್ತೀಚಿಗಷ್ಟೇ ಬಿಜೆಪಿ ಐಟಿ ಸೆಲ್ ಸದಸ್ಯರ ಸಭೆ ನಡೆದಿದ್ದು. ಇದರಲ್ಲಿ ಈ ಬಗ್ಗೆ ಚರ್ಚೆ ನಡೆದಿದೆ. ಎಲ್ಲಾ ರಾಜ್ಯಗಳಿಂದಲೂ ಸೈಬರ್ ಪರಿಣಿತರ ನೇಮಕಾತಿ ನಡೆಯಲಿದೆ ಎನ್ನಲಾಗಿದೆ.
2019ರ ಲೋಕಸಭಾ ಚುನಾವಣೆಗಾಗಿ ‘ಸೈಬರ್ ಸೇನಾ’ವನ್ನು ಸಿದ್ಧಪಡಿಸುತ್ತಿದ್ದೇವೆ. ಪ್ರತಿ ಬೂತ್ನಲ್ಲೂ ಸೈಬರ್ ಯೋಧರಿದ್ದಾರೆ ಎಂದು ಯುಪಿ ಐಟಿ ಸೆಲ್ ಮುಖ್ಯಸ್ಥ ಜೆಪಿಎಸ್ ರಾಥೋಡ್ ಹೇಳಿದ್ದಾರೆ.
‘ಇಂಟರ್ನೆಟ್, ಸಾಮಾಜಿಕ ಜಾಲತಾಣಗಳು ವಿವಿಧ ಜನಪರ ಯೋಜನೆಗಳನ್ನು ಜನರ ಬಳಿ ತಲುಪಿಸುವಲ್ಲಿ ಮಹತ್ವದ ಕಾರ್ಯ ನಿರ್ವಹಿಸುತ್ತಿದೆ. ಪಕ್ಷದ ಸಿದ್ಧಾಂತವನ್ನು ಜನರಿಗೆ ತಿಳಿಸಲು, ಜನರೊಂದಿಗೆ ಸಂವಹನ ನಡೆಸಲು ಪ್ರಮುಖ ಅಸ್ತ್ರವಾಗಿದೆ. ನಮ್ಮ ಪಕ್ಷ 15ರಿಂದ 20 ಲಕ್ಷ ಸೈಬರ್ ಯೋಧರನ್ನು ಸಜ್ಜುಗೊಳಿಸುತ್ತಿದೆ’ ಎಂದಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.