ಶ್ರೀನಗರ: ಜಮ್ಮು ಕಾಶ್ಮೀರದ ಬಂಡಿಪೋರ ಜಿಲ್ಲೆಯಲ್ಲಿ ಗುರುವಾರ ಬೃಹತ್ ಭಯೋತ್ಪಾದನಾ ವಿರೋಧಿ ಕಾರ್ಯಾಚರಣೆ ನಡೆಸಿದ ಭದ್ರತಾ ಪಡೆಗಳು, ಕನಿಷ್ಠ ಇಬ್ಬರು ಉಗ್ರರನ್ನು ಹತ್ಯೆ ಮಾಡುವಲ್ಲಿ ಯಶಸ್ವಿಯಾಗಿವೆ. ಒರ್ವ ಯೋಧ ಹುತಾತ್ಮರಾಗಿದ್ದಾರೆ.
ಬಂಡಿಪೋರ ಜಿಲ್ಲೆಯೊಂದಿಗೆ ತಾಗಿರುವ ದಟ್ಟವಾದ ಪನರ್ ಅರಣ್ಯದೊಳಗೆ ಉಗ್ರರು ಅವಿತಿದ್ದಾರೆ ಎಂಬ ಖಚಿತ ಮಾಹಿತಿಯನ್ನು ಆಧರಿಸಿ ಭದ್ರತಾ ಪಡೆಗಳು ಕಾರ್ಯಾಚರಣೆಯನ್ನು ಆರಂಭಿಸಿವೆ.
ಸಿಆರ್ಪಿಎಫ್ ಮತ್ತು ರಾಷ್ಟ್ರೀಯ ರೈಫಲ್ಸ್ ಜಂಟಿಯಾಗಿ ಕಾರ್ಯಾಚರಣೆಯನ್ನು ನಡೆಸಿದ್ದು, ಉಳಿದ ಉಗ್ರರಿಗಾಗಿ ಶೋಧ ನಡೆಸುತ್ತಿವೆ.
ಮೃತ ಉಗ್ರರ ಗುರುತು ಇನ್ನೂ ಪತ್ತೆಯಾಗಿಲ್ಲ.
ನಿನ್ನೆ ಸಾಂಬಾ ಸೆಕ್ಟರ್ನಲ್ಲಿ ಪಾಕಿಸ್ಥಾನ ನಡೆಸಿದ ಅಪ್ರಚೋದಿತ ದಾಳಿಗೆ ನಾಲ್ವರು ಯೋಧರು ಬಲಿಯಾಗಿದ್ದರು. ಇತರ ಮೂವರಿಗೆ ಗಾಯಗಳಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯ ಸೇನೆ ಕಾರ್ಯಾಚರಣೆ ಆರಂಭಿಸಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.