ನವದೆಹಲಿ: ತನ್ನ ಮೊತ್ತ ಮೊದಲ ಐತಿಹಾಸಿಕ ಅಂತಾರಾಷ್ಟ್ರೀಯ ಟೆಸ್ಟ್ ಕ್ರಿಕೆಟ್ ಪಂದ್ಯವನ್ನು ಭಾರತದ ವಿರುದ್ಧ ಆಡುತ್ತಿರುವ ಅಫ್ಘಾನಿಸ್ತಾನಕ್ಕೆ ಪ್ರಧಾನಿ ನರೇಂದ್ರ ಮೋದಿ ಅಭಿನಂದನೆಗಳನ್ನು ತಿಳಿಸಿದ್ದಾರೆ.
ಅಫ್ಘಾನ್ನ ರಾಷ್ಟ್ರೀಯ ಕ್ರಿಕೆಟ್ ತಂಡ ಇಂದು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಭಾರತದ ವಿರುದ್ಧ ಟೆಸ್ಟ್ ಪಂದ್ಯ ಆಡುತ್ತಿದೆ.
ಟ್ವಿಟರ್ ಮೂಲಕ ಎರಡೂ ತಂಡಗಳಿಗೆ ಶುಭಾಶಯ ಕೋರಿರುವ ಮೋದಿ, ’ಭಾರತದ ವಿರುದ್ಧ ಮೊದಲ ಅಂತಾರಾಷ್ಟ್ರೀಯ ಟೆಸ್ಟ್ ಕ್ರಿಕೆಟ್ ಪಂದ್ಯ ಆಡುತ್ತಿರುವ ಅಫ್ಘಾನಿಸ್ತಾನಕ್ಕೆ ಅಭಿನಂದನೆಗಳು. ಐತಿಹಾಸಿಕ ಪಂದ್ಯವನ್ನು ಆಡಲು ಭಾರತವನ್ನು ಆಯ್ಕೆ ಮಾಡಿದಕ್ಕೆ ಧನ್ಯವಾದಗಳು. ಉಭಯ ತಂಡಗಳಿಗೂ ಶುಭಾಶಯ. ಕ್ರೀಡೆ ನಮ್ಮ ಜನರನ್ನು ಹತ್ತಿರ ತರಲಿ ಮತ್ತು ನಮ್ಮ ಬಾಂಧವ್ಯವನ್ನು ಗಟ್ಟಿಗೊಳಿಸಲಿ ಎಂದು ಆಶಿಸುತ್ತೇನೆ’ ಎಂದಿದ್ದಾರೆ.
ಕ್ರೀಡಾ ಸಚಿವ ರಾಜವರ್ಧನ್ ಸಿಂಗ್ ರಾಥೋಡ್ ಅವರು ಕೂಡ ಉಭಯ ತಂಡಗಳಿಗೆ ಶುಭ ಕೋರಿದ್ದಾರೆ
I congratulate the people of Afghanistan as their cricket team plays their first international test match. Glad that they have chosen to play the historic match with India. Best wishes to both teams! May sports continue to bring our people closer and strengthen ties.
— Narendra Modi (@narendramodi) June 14, 2018
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.