ಶ್ರೀನಗರ: ಜಮ್ಮು ಕಾಶ್ಮೀರದಲ್ಲಿ ಉಗ್ರರ ಅಟ್ಟಹಾಸ ಮಿತಿ ಮೀರುತ್ತಿದೆ. ಹಿರಿಯ ಪತ್ರಕರ್ತ ಶುಜಾತ್ ಬುಖಾರಿಯವರನ್ನು ಶ್ರೀನಗರದಲ್ಲಿನ ಅವರ ಕಛೇರಿಯ ಹೊರಭಾಗದಲ್ಲೇ ಗುಂಡಿಕ್ಕಿ ಹತ್ಯೆ ಮಾಡಲಾಗಿದೆ. ಈ ಘಟನೆ ದೇಶವನ್ನೇ ತಲ್ಲಣಗೊಳಿಸಿದೆ.
ಬುಖಾರಿಯವರು ‘ರೈಸಿಂಗ್ ಕಾಶ್ಮೀರ್’ ನ್ಯೂಸ್ಪೇಪರ್ ಸಂಪಾದಕರಾಗಿದ್ದು, ಅತೀ ಸಮೀಪದಲ್ಲೇ ದುಷ್ಕರ್ಮಿಗಳು ಇವರನ್ನು ಕೊಲೆ ಮಾಡಿದ್ದಾರೆ. ಇಬ್ಬರು ಸೆಕ್ಯೂರಿಟಿ ಗಾರ್ಡ್ಗಳೂ ಹತರಾಗಿದ್ದಾರೆ.
ಮೂವರು ಮೋಟಾರು ಬೈಕಿನಲ್ಲಿ ಬಂದು ಅವರ ಮೇಲೆ ಗುಂಡಿನ ದಾಳಿ ಮಾಡುತ್ತಿರುವ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಪತ್ತೆಯಾಗಿದೆ.
ಪ್ರಗತಿಪರ ಮತ್ತು ಧೈರ್ಯವಂತ ಪತ್ರಕರ್ತನಾಗಿದ್ದ ಬುಖಾರಿ ಎಲ್ಲರ ಪ್ರಶಂಸೆಗೆ ಪಾತ್ರರಾಗಿದ್ದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.