ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರು ಇಂದು ತಮ್ಮ ನಮೋ ಅಪ್ಲಿಕೇಶನ್ ಮೂಲಕ ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷೆಯ ಡಿಜಿಟಲ್ ಇಂಡಿಯಾ ಯೋಜನೆಯ ಫಲಾನುಭವಿಗಳೊಂದಿಗೆ ಸಂವಾದ ನಡೆಸಿದರು. ವೀಡಿಯೋ ಕಾನ್ಫರೆನ್ಸ್ ಮೂಲಕ ಅವರು ಆಯೋಜಿಸುತ್ತಿರುವ ನಾಲ್ಕನೇ ಸಂವಾದ ಇದಾಗಿದೆ.
ಫಲಾನುಭವಿಗಳನ್ನು ಉದ್ದೇಶಿಸಿ ಮಾತನಾಡಿದ ಮೋದಿ, ’ಹೆಚ್ಚಿನ ಜನರು ಅದರಲ್ಲೂ ಮುಖ್ಯವಾಗಿ ಗ್ರಾಮೀಣ ಜನತೆ ತಂತ್ರಜ್ಞಾನದ ಖುಷಿಯನ್ನು ಆಸ್ವಾದಿಸಲಿ ಎಂಬ ಸಿಂಪಲ್ ಕಾರಣಕ್ಕೆ ನಮ್ಮ ಸರ್ಕಾರ ಡಿಜಿಟಲ್ ಇಂಡಿಯಾ ಯೋಜನೆಯನ್ನು ಆರಂಭಿಸಿದೆ’ ಎಂದರು.
‘ತಂತ್ರಜ್ಞಾನದಿಂದಾಗಿ ರೈಲು ಟಿಕೆಟ್ಗಳನ್ನು, ವಿವಿಧ ಶುಲ್ಕಗಳನ್ನು ಆನ್ಲೈನ್ ಮೂಲಕ ಪಾವತಿಸಬಹುದಾಗಿದೆ. ಇದು ನಮಗೆ ಆರಾಮದಾಯಕತೆ ನೀಡುತ್ತದೆ. ಕೆಲವರಿಗೆ ಮಾತ್ರವಲ್ಲ ಎಲ್ಲರಿಗೂ ತಂತ್ರಜ್ಞಾನದ ಲಾಭ ಸಿಗಲಿ ಎಂಬುದು ನಮ್ಮ ಆಶಯ’ ಎಂದರು.
ಭಾರತವನ್ನು ಡಿಜಿಟಲೀಕರಣಗೊಳಿಸುವ ಮಹತ್ವದ ಉದ್ದೇಶದೊಂದಿಗೆ ಮೋದಿ ಸರ್ಕಾರ ಡಿಜಿಟಲ್ ಇಂಡಿಯಾ ಯೋಜನೆಯನ್ನು ಅನುಷ್ಠಾನಗೊಳಿಸಿತ್ತು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.