ಪಣಜಿ: ಮೂರು ತಿಂಗಳುಗಳ ಕಾಲ ಅಮೆರಿಕಾದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಗೋವಾ ಮುಖ್ಯಮಂತ್ರಿ ಮನೋಹರ್ ಪರಿಕ್ಕರ್ ಅವರು ಗುರುವಾರ ಭಾರತಕ್ಕೆ ಮರಳಿದ್ದು, ಶುಕ್ರವಾರದಿಂಲೇ ಕಾರ್ಯವನ್ನು ಆರಂಭಿಸಿದ್ದಾರೆ.
ಇಂದು ಬೆಳಿಗ್ಗೆ ಉತ್ತರ ಗೋವಾದಿಂದ 15 ಕಿಮೀ ದೂರದಲ್ಲಿರುವ ಖೋಂಡಾಲದ ದೇವಕಿ ಕೃಷ್ಣ ದೇಗುಲಕ್ಕೆ ಭೇಟಿ ನೀಡಿ ಅವರು ಪ್ರಾರ್ಥನೆ ಸಲ್ಲಿಸಿದ್ದಾರೆ. ದೇವಕಿ ಕೃಷ್ಣ ಅವರ ಮನೆ ದೇವರು. ಬಳಿಕ ಪಣಜಿಯ ಮಹಾಲಕ್ಷ್ಮೀ ದೇವಾಲಯಕ್ಕೆ ತೆರಳಿ ದೇವಿಯ ದರ್ಶನ ಪಡೆದುಕೊಂಡಿದ್ದಾರೆ.
ಬಳಿಕ ತಮ್ಮ ಕಾರ್ಯಾಲಯಕ್ಕೆ ಬಂದ ಅವರು, ಅಧಿಕಾರಿಗಳ ಜೊತೆ ಸಭೆ ನಡೆಸಿದ್ದಾರೆ.
ಟ್ವಿಟ್ ಮಾಡಿರುವ ಅವರು, ‘ಕಾರ್ಯವನ್ನು ಮರು ಆರಂಭಿಸಿದ್ದೇನೆ. ನಾನು ಚೇತರಿಸಿಕೊಳ್ಳಲು ಅತ್ಯಗತ್ಯವಾಗಿ ಬೇಕಾದ ಬೆಂಬಲ ಮತ್ತು ಶಕ್ತಿಯನ್ನು ಪ್ರಾರ್ಥನೆ ಮತ್ತು ಆಶೀರ್ವಾದದ ರೂಪದಲ್ಲಿ ನೀಡಿದ ಎಲ್ಲರಿಗೂ ನನ್ನ ಧನ್ಯವಾದಗಳು’ ಎಂದಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.