ನವದೆಹಲಿ: ದೆಹಲಿ ಮತ್ತು ಇತರ ಉತ್ತರಭಾಗದ ಗಾಳಿಯ ಗುಣಮಟ್ಟ ಶೀಘ್ರದಲ್ಲೇ ಸುಧಾರಣೆಯಾಗಲಿದೆ ಎಂದು ಕೇಂದ್ರ ಪರಿಸರ ಸಚಿವ ಹರ್ಷವರ್ಧನ್ ಹೇಳಿದ್ದಾರೆ.
ವಿಪರೀತ ಧೂಳು, ಗಾಳಿಯ ಗುಣಮಟ್ಟ ಕುಸಿಯಲು ಪ್ರಮುಖ ಕಾರಣ ಎಂದು ಅವರು ಆರೋಪಿಸಿದ್ದಾರೆ. ಧೂಳಿನಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಪಾರ್ಟಿಕ್ಯುಲೇಟ್ ಮ್ಯಾಟರ್(ಪಿಎಂ)10 ಇದ್ದು , ಇದು ಗಾಳಿಯನ್ನು ಕಲುಷಿತಗೊಳಿಸುತ್ತಿದೆ. ಈ ಬಗ್ಗೆ ನಾವು ಎಚ್ಚರಿಕೆ ನೀಡಿದ್ದೇವೆ ಎಂದಿದ್ದಾರೆ.
ಕಲುಷಿತ ಗಾಳಿ ಸಮಸ್ಯೆ ಎದುರಿಸುತ್ತಿರುವ ರಾಜ್ಯಗಳಿಗೆ ನಾವು ಕೆಲವೊಂದು ನಿರ್ದೇಶನಗಳನ್ನು ನೀಡಿದ್ದೇವೆ, ಇನ್ನು 2-3 ದಿನಗಳಲ್ಲಿ ಗಾಳಿ ಸಹಜ ಸ್ಥಿತಿಗೆ ಮರಳಬಹುದು ಎಂದಿದ್ದಾರೆ.
ಹೊರಗಡೆ ಹೆಚ್ಚು ಸುತ್ತಾಡದೆ, ಕಟ್ಟಡದೊಳಗೆ ಹೆಚ್ಚು ಕಾಲ ಕಳೆಯುವಂತೆ ಅವರು ಜನರಿಗೆ ಮನವಿ ಮಾಡಿಕೊಂಡಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.