ಜೋಧ್ಪುರ: ರಾಜಸ್ಥಾನದಲ್ಲಿ ಭಾನುವಾರ 108 ಪಾಕಿಸ್ಥಾನ ಮೂಲದ ಹಿಂದೂಗಳಿಗೆ ಭಾರತದ ಪೌರತ್ವವನ್ನು ನೀಡಲಾಗಿದೆ.
ಜೋಧಪುರದ ಜಿಲ್ಲಾಧಿಕಾರಿ ರವಿಕುಮಾರ್ ಸುರ್ಪುರ್ ಅವರು ಇವರಿಗೆ ಭಾರತದ ನಾಗರಿಕತ್ವದ ಸರ್ಟಿಫಿಕೇಟ್ಗಳನ್ನು ಹಸ್ತಾಂತರ ಮಾಡಿದರು. ಈ ವೇಳೆ ‘ಭಾರತ್ ಮಾತಾ ಕೀ ಜೈ’ ಎಂಬ ಉದ್ಘೋಷಗಳು ಮೊಳಗಿದವು. ಬಹುತೇಕರ ಕಣ್ಣಾಲಿಗಳು ಒದ್ದೆಯಾದವು.
ಸೀಮಂತ್ ಲೋಕ ಸಂಘಟನ್ನ ಅಧ್ಯಕ್ಷ ಹಿಂದೂ ಸಿಂಗ್ ಸೋದಾ ಅವರು ಈ ವಲಸಿಗರಿಗೆ ಭಾರತದ ನಾಗರಿಕತ್ವ ನೀಡುವಂತೆ ಮಾಡಲು ಸಾಕಷ್ಟು ಶ್ರಮಿಸಿದ್ದಾರೆ.
ಇನ್ನೂ 6 ಸಾವಿರ ಪಾಕ್ ವಲಸಿಗರು ಭಾರತದ ಪೌರತ್ವಕ್ಕಾಗಿ ಕಾಯುತ್ತಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.