ಮುಂಬಯಿ: ಕೊನೆಯ ಉಸಿರಿರುವವರೆಗೂ ಭಾರತಕ್ಕಾಗಿ ಹೋರಾಡಿ ಪ್ರಾಣ ತ್ಯಾಗ ಮಾಡಿದ ವೀರ ಯೋಧ ಅರುಣ್ ಖೇತರ್ಪಾಲ್ ಅವರ ಜೀವನಾಧಾರಿತ ಹಿಂದಿ ಸಿನಿಮಾವೊಂದು ಶೀಘ್ರದಲ್ಲೇ ನಿರ್ಮಾಣವಾಗಲಿದೆ. ನಿರ್ದೇಶಕ ಶ್ರೀರಾಮ್ ರಾಘವನ್ ಮತ್ತು ನಿರ್ಮಾಪಕ ದಿನೇಶ್ ವಿಜನ್ ಇದಕ್ಕಾಗಿ ಸಜ್ಜಾಗುತ್ತಿದ್ದಾರೆ.
1971ರ ಪಾಕಿಸ್ಥಾನ ವಿರುದ್ಧದ ಯುದ್ಧದಲ್ಲಿ ತಾಯ್ನಾಡಿಗಾಗಿ ಹೋರಾಡಿದ ಭಾರತೀಯ ಸೇನೆಯ ಎರಡನೇ ಲೆಫ್ಟಿನೆಂಟ್ ಅರುಣ್ ಖೇತರ್ಪಾಲ್. ಇವರಿಗೆ ದೇಶದ ಅತ್ಯುನ್ನತ ಶೌರ್ಯ ಪ್ರಶಸ್ತಿ ಪರಮ ವೀರ ಚಕ್ರವನ್ನು ಮರಣೋತ್ತರವಾಗಿ ನೀಡಲಾಗಿದೆ.
‘ಬದ್ಲಾಪುರ್’ ಸಿನಿಮಾ ನಿರ್ದೇಶಿಸಿ ಸೈ ಎನಿಸಿಕೊಂಡಿರುವ ಶ್ರೀರಾಮ್, ಯೋಧನೊಬ್ಬನ ಜೀವನಗಾಥೆಯನ್ನು ತೆರೆ ಮೇಲೆ ತರಲು ಸಿದ್ಧರಾಗುತ್ತಿದ್ದಾರೆ. ತಾರಾಗಣದ ಬಗ್ಗೆ ಯಾವುದೇ ಮಾಹಿತಿಯನ್ನು ಬಹಿರಂಗಪಡಿಸಲಾಗಿಲ್ಲ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.