ನವದೆಹಲಿ: ಜಮ್ಮು ಕಾಶ್ಮೀರದಲ್ಲಿ ಪಿಡಿಪಿ ಸರ್ಕಾರಕ್ಕೆ ನೀಡಿದ್ದ ಬೆಂಬಲವನ್ನು ಬಿಜೆಪಿ ವಾಪಾಸ್ ಪಡೆದುಕೊಂಡ ಹಿನ್ನಲೆಯಲ್ಲಿ ಅಲ್ಲಿ ರಾಜ್ಯಪಾಲರ ಆಳ್ವಿಕೆ ಜಾರಿಗೊಂಡಿದೆ. ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರು ಇದಕ್ಕೆ ಅನುಮೋದನೆಯನ್ನೂ ನೀಡಿದ್ದಾರೆ.
ರಾಷ್ಟ್ರಪತಿಗಳು ಬುಧವಾರ ರಾಜ್ಯಪಾಲರ ಆಳ್ವಿಕೆಗೆ ಅನುಮೋದನೆ ನೀಡಿದ ಹಿನ್ನಲೆಯಲ್ಲಿ ಜಮ್ಮು ಕಾಶ್ಮೀರದ ರಾಜ್ಯಪಾಲ ಎನ್ಎನ್ ವೊಹ್ರಾ ಅವರು ಇನ್ನು ಮುಂದೆ ಅಲ್ಲಿನ ಆಡಳಿತಾತ್ಮಕ ಜವಾಬ್ದಾರಿಯನ್ನು ಹೊತ್ತುಕೊಳ್ಳಲಿದ್ದಾರೆ. 2008, 2015 ಮತ್ತು 2016ರಲ್ಲೂ ಅವರು ಇಲ್ಲಿ ರಾಜ್ಯಪಾಲ ಆಡಳಿತದ ನೇತೃತ್ವ ವಹಿಸಿಕೊಂಡಿದ್ದರು.
ಇನ್ನು ಕೆಲವೇ ದಿನಗಳಲ್ಲಿ ವೊಹ್ರಾ ಅಧಿಕಾರಾವಧಿ ಅಂತ್ಯವಾಗಲಿದೆ. ಆದರೆ ಅಮರನಾಥ ಯಾತ್ರೆ ಅಂತ್ಯಗೊಳ್ಳುವ ಆಗಸ್ಟ್ 26ರವರೆಗೆ ರಾಜಭವನದಲ್ಲಿ ಮುಂದುವರೆಯುವ ಸಾಧ್ಯತೆ ಇದೆ ಎನ್ನಲಾಗಿದೆ.
ಬಿಜೆಪಿ ಬೆಂಬಲ ವಾಪಾಸ್ ಪಡೆದ ಹಿನ್ನಲೆಯಲ್ಲಿ ಸಿಎಂ ಮೆಹಬೂಬಾ ಮುಫ್ತಿಯವರು ರಾಜ್ಯಪಾಲರಿಗೆ ರಾಜೀನಾಮೆ ಸಲ್ಲಿಕೆ ಮಾಡಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.