ಶ್ರೀನಗರ: ಉಗ್ರರಿಂದ ಅಪಹರಿಸಲ್ಪಟ್ಟು ಹತ್ಯೆಯಾದ ಭಾರತೀಯ ಸೇನಾಪಡೆಯ ಸಿಪಾಯಿ ಔರಂಗಜೇಬ್ ಅವರ ನಿವಾಸಕ್ಕೆ ಬುಧವಾರ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಭೇಟಿ ನೀಡಿ, ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿದರು.
ಜಮ್ಮು ಕಾಶ್ಮೀರದ ಪೂಂಚ್ ಜಿಲ್ಲೆಯ ಸಲನಿ ಗ್ರಾಮದಲ್ಲಿ ಔರಂಗಜೇಬ್ ಅವರ ಮನೆಯಿದೆ. ಇಂದು ಅಲ್ಲಿಗೆ ತೆರಳಿರುವ ಸೀತಾರಾಮನ್, ದುಃಖತಪ್ತ ಕುಟುಂಬ ಸದಸ್ಯರೊಂದಿಗೆ ಮಾತನಾಡಿ ಅವರಿಗೆ ಸಾಂತ್ವನ ಹೇಳಿದರು.
ಜಮ್ಮು ಕಾಶ್ಮೀರದ ಭದ್ರತಾ ಪರಿಸ್ಥಿತಿಗಳ ಬಗ್ಗೆಯೂ ಅವರು ಇಂದು ಪರಿಶೀಲನೆ ನಡೆಸಲಿದ್ದಾರೆ.
ಮೊನ್ನೆಯಷ್ಟೇ ಸೇನಾ ಮುಖ್ಯಸ್ಥ ಜನರಲ್ ಬಿಪಿನ್ ಸಿಂಗ್ ರಾವತ್ ಅವರು ಔರಂಗಜೇಬ್ ನಿವಾಸಕ್ಕೆ ತೆರಳಿ ಅವರ ತಂದೆ, ಸಹೋದರನೊಂದಿಗೆ ಮಾತನಾಡಿದ್ದರು. ಈ ತ್ಯಾಗವನ್ನು ವ್ಯರ್ಥವಾಗಲು ಬಿಡಲಾರೆವು ಎಂದು ಭರವಸೆ ನೀಡಿದ್ದರು.
ಜೂನ್ 14ರಂದು ರೈಫಲ್ಮನ್ ಔರಂಗಜೇಬ್ ಅವರನ್ನು ಅಪಹರಿಸಿದ್ದ ಉಗ್ರರು ಬಳಿಕ ಅವರನ್ನು ಗುಂಡಿಕ್ಕಿ ಹತ್ಯೆ ಮಾಡಿದ್ದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.