ನವದೆಹಲಿ: ಶಾಲೆಗಳಲ್ಲಿ ಮುಸ್ಲಿಂ ಮತ್ತು ದಲಿತ ಸಮುದಾಯದ ವಿದ್ಯಾರ್ಥಿಗಳು ಎದುರಿಸುತ್ತಿರುವ ತಾರತಮ್ಯಗಳನ್ನು ಹೋಗಲಾಡಿಸಲು ಕ್ರಮಗಳನ್ನು ಮತ್ತು ತರಬೇತಿ ಕಾರ್ಯಕ್ರಮಗಳನ್ನು ಆಯೋಜನೆಗೊಳಿಸುವಂತೆ ಎಲ್ಲಾ ರಾಜ್ಯಗಳಿಗೂ ಕೇಂದ್ರ ಸರ್ಕಾರ ಸಲಹೆ ನೀಡಿದೆ.
ಅಲ್ಲದೇ ಹೆಚ್ಚು ದಲಿತ ಮತ್ತು ಮುಸ್ಲಿಂ ಸಮುದಾಯದವರಿರುವ ಪ್ರದೇಶಗಳಲ್ಲಿ ಶಾಲೆಗಳ ಸಂಖ್ಯೆಯನ್ನು ಹೆಚ್ಚಿಸುವಂತೆ ಸಲಹೆ ನೀಡಿದೆ.
ವರದಿ ಮಾಡಲು ಹೊಸ ವ್ಯವಸ್ಥೆಯ ರಚನೆ, ಶಾಲಾ ಮಂಡಳಿಯಲ್ಲಿ ವೈವಿಧ್ಯತೆ ತರುವುದು, ಸೂಕ್ಷ್ಮತೆ ತರುವ ಕಾರ್ಯಕ್ರಮಗಳನ್ನು ಆಯೋಜನೆಗೊಳಿಸುವ ಮೂಲಕ ಮುಸ್ಲಿಂ, ದಲಿತ ಸಮುದಾಯದ ವಿದ್ಯಾರ್ಥಿಗಳು ಎದುರಿಸುತ್ತಿರುವ ತಾರತಮ್ಯವನ್ನು ಹೋಗಲಾಡಿಸಲು ಸಾಧ್ಯ ಎಂದು ಕೇಂದ್ರ ಅಭಿಪ್ರಾಯಪಟ್ಟಿದೆ.
ತನ್ನ ‘ಸಮಗ್ರ ಶಿಕ್ಷಾ ಅಭಿಯಾನ’ದ ಭಾಗವಾಗಿ ಈ ಶಿಫಾರಸ್ಸನ್ನು ಕೇಂದ್ರ ಮಾಡಿದೆ.
ದಲಿತ ವಿದ್ಯಾರ್ಥಿಗಳನ್ನು ಸಮಾರಂಭಗಳಿಂದ ದೂರ ಇಡುವುದು, ಶಾಲೆಯ ಸೌಲಭ್ಯಗಳನ್ನು ಬಳಕೆ ಮಾಡದಂತೆ ತಡೆಯುವುದು, ಕೆಳ ಮಟ್ಟದ ಕೆಲಸಗಳನ್ನು ಮಾಡಿಸುವುದು ಇತ್ಯಾದಿಗಳನ್ನು ಶಾಲೆಗಳು ಮಾಡಬಾರದು ಎಂದಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.