ನವದೆಹಲಿ: ಜಮ್ಮು ಕಾಶ್ಮೀರದಲ್ಲಿ ರಾಜ್ಯಪಾಲರ ಆಡಳಿತ ಜಾರಿಯಾಗಿರುವುದರಿಂದ ಸೇನೆಯ ಭಯೋತ್ಪಾದನಾ ವಿರೋಧಿ ಕಾರ್ಯಾಚರಣೆಗಳ ಮೇಲೆ ಯಾವುದೇ ತರನಾದ ಪ್ರಭಾವ ಬೀರುವುದಿಲ್ಲ ಎಂದು ಸೇನಾಮುಖ್ಯಸ್ಥ ಬಿಪಿನ್ ಸಿಂಗ್ ರಾವತ್ ಹೇಳಿದ್ದಾರೆ.
‘ನಾವು ಕೇವಲ ರಂಜಾನ್ ತಿಂಗಳಲ್ಲಿ ಕಾರ್ಯಾಚರಣೆ ಸ್ಥಗಿತಗೊಳಿಸಿದ್ದೆವು, ಎಂದಿನಂತೆ ನಮ್ಮ ಕಾರ್ಯಾಚರಣೆ ಇನ್ನು ಮುಂದುವರೆಯಲಿದೆ. ಯಾವುದೇ ರಾಜಕೀಯ ಮಧ್ಯಪ್ರವೇಶ ಇದರಲ್ಲಿ ಇಲ್ಲ’ ಎಂದು ರಾವತ್ ಸ್ಪಷ್ಟಪಡಿಸಿದ್ದಾರೆ.
ಜಮ್ಮು ಕಾಶ್ಮೀರದ ಹಿರಿಯ ಪೊಲೀಸ್ ಅಧಿಕಾರಿ ಎಸ್ಪಿ ವೈದ್ ಅವರೂ ಇದೇ ಮಾತನ್ನು ಹೇಳಿದ್ದು, ಗವರ್ನರ್ ಆಡಳಿತದಲ್ಲಿ ಪೊಲೀಸರಿಗೆ ಕಾರ್ಯನಿರ್ವಹಿಸುವುದು ಸುಲಭ ಎಂದಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.