ಶ್ರೀನಗರ: ಜಮ್ಮು ಕಾಶ್ಮೀರದ ರಾಜ್ಯಪಾಲ ಎನ್ಎನ್ ವೊಹ್ರಾ ಅವರು ಹಿರಿಯ ಐಎಎಸ್ ಅಧಿಕಾರಿ ಬಿವಿಆರ್ ಸುಬ್ರಹ್ಮಣ್ಯಂ ಅವರನ್ನು ರಾಜ್ಯದ ನೂತನ ಮುಖ್ಯ ಕಾರ್ಯದರ್ಶಿಗಳನ್ನಾಗಿ ನೇಮಕಗೊಳಿಸಿದ್ದಾರೆ.
ಅಲ್ಲದೇ ನಿವೃತ್ತ ಐಪಿಎಸ್ ಅಧಿಕಾರಿ ವಿಜಯ್ ಕುಮಾರ್ ಮತ್ತು ಪ್ರಸ್ತುತ ಮುಖ್ಯ ಕಾರ್ಯದರ್ಶಿಗಳಾಗಿರುವ ಬಿಬಿ ವ್ಯಾಸ್ ಅವರನ್ನು ರಾಜ್ಯಪಾಲರ ಸಲಹೆಗಾರರಾಗಿ ನೇಮಕ ಮಾಡಲಾಗಿದೆ.
ಪಿಡಿಪಿಗೆ ನೀಡಿದ ಬೆಂಬಲವನ್ನು ಬಿಜೆಪಿ ವಾಪಾಸ್ ಪಡೆದ ಹಿನ್ನಲೆಯಲ್ಲಿ ಜಮ್ಮು ಕಾಶ್ಮೀರದ ಸರ್ಕಾರ ಪತನಗೊಂಡಿದ್ದು, ಸಿಎಂ ಆಗಿದ್ದ ಮೆಹಬೂಬ ಮುಫ್ತಿ ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಈ ಹಿನ್ನಲೆಯಲ್ಲಿ ಅಲ್ಲಿ ರಾಜ್ಯಪಾಲರ ಆಡಳಿತಕ್ಕೆ ರಾಷ್ಟ್ರಪತಿಗಳು ಅನುಮೋದನೆಯನ್ನು ನೀಡಿದ್ದಾರೆ.
ಸಂವಿಧಾನ ಕಲಂ 92ರ ಅಡಿಯಲ್ಲಿ ಕಣಿವೆ ರಾಜ್ಯದಲ್ಲಿ ರಾಜ್ಯಪಾಲರ ಆಡಳಿತ ಜಾರಿಗೊಂಡಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.