ಶಿಲ್ಲಾಂಗ್: ಪ್ರಧಾನಿ ನರೇಂದ್ರ ಮೋದಿಯವರ ಮಹತ್ವಾಕಾಂಕ್ಷೆಯ ಸ್ಮಾರ್ಟ್ ಸಿಟಿ ಯೋಜನೆಗೆ ಮತ್ತೊಂದು ಹೊಸ ನಗರ ಸೇರ್ಪಡೆಯಾಗಿದೆ, ಮೇಘಾಲಯದ ಶಿಲ್ಲಾಂಗ್ ಸ್ಮಾರ್ಟ್ಸಿಟಿ ಯೋಜನೆಗೆ ಆಯ್ಕೆಗೊಂಡ 100ನೇ ನಗರವಾಗಿದೆ.
ಕಳೆದ ಎರಡು ವರ್ಷಗಳ ಹಿಂದೆ ಮೋದಿ ಸರ್ಕಾರ ಸ್ಮಾರ್ಟ್ಸಿಟಿ ಯೋಜನೆಯನ್ನು ಜಾರಿಗೆ ತಂದಿತ್ತು. ಇದಕ್ಕಾಗಿ 99 ನಗರಗಳನ್ನು ಆಯ್ಕೆ ಮಾಡಲಾಗಿತ್ತು. ಈಗ ಹೊಸದಾಗಿ ಶಿಲ್ಲಾಂಗ್ ಈ ಯೋಜನೆಗೊಳಪಟ್ಟಿದ್ದು, ಈ ಮೂಲಕ ಸ್ಮಾರ್ಟ್ಸಿಟಿಗೆ ಒಟ್ಟು 100 ನಗರಗಳು ಸೇರ್ಪಡೆಯಾಗಿವೆ.
ಸ್ಮಾರ್ಟ್ಸಿಟಿ ಯೋಜನೆಯಡಿ 100 ನಗರಗಳನ್ನು ಅಭಿವೃದ್ಧಿಪಡಿಸಲು ರೂ.2,05,018 ಕೋಟಿಗಳನ್ನು ಘೋಷಿಸಲಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.