Sunday, June 7th, 2015
News13
ಮಂಗಲ್ಪಾಡಿ : ಮಂಗಲ್ಪಾಡಿ ಸರಕಾರಿ ಹಿರಿಯ ಮಾಧ್ಯಮಿಕ ಶಾಲೆಯಲ್ಲಿ ವಿಶ್ವ ಪರಿಸರ ದಿನವನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ಶಾಲಾ ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷರಾದ ಉಮ್ಮರ್ ಅಪೋಲೋ ಮಕ್ಕಳಿಗೆ ನೆರಳು ಮರಗಳ ಗಿಡಗಳನ್ನು ವಿತರಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿದರು.

ಶಾಲಾ ಮುಖ್ಯೋಪಾಧ್ಯಾಯಿನಿ ಲತ ಕೆ ಅಧ್ಯಕ್ಷತೆ ವಹಿಸಿದರು. ರಕ್ಷಕ ಶಿಕ್ಷಕ ಸಂಘದ ಉಪಾಧ್ಯಕ್ಷ ಅಬ್ದುಲ್ ಹಮೀದ್, ಅಧ್ಯಾಪಕರಾದ ಸುನಿಲ್ ಕುಮಾರ್, ಪ್ರಕಾಶನ್ ಇ ಆರ್, ಮೊಯ್ದೀನ್, ಶೀಲಾ ಕೆ ಎಸ್ ಅಧ್ಯಾಪಕ ಸಂಘದ ಕಾರ್ಯದರ್ಶಿ ವಸಂತಕುಮಾರ್ ಶುಭ ಹಾರೈಸಿದರು. ಶಾಲಾ ಕೃಷಿ ಮತ್ತು ಪರಿಸರ ಸಂಘದ ಸಂಚಾಲಕ ಉಮೇಶ್ ನಾಯ್ಕ್ ಸ್ವಾಗತಿಸಿ ಸಹಸಂಚಾಲಕ ಚಂದ್ರನ್ ಇ ವಂದಿಸಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.