ಶ್ರೀನಗರ: ಕರ್ನಾಟಕ ಮತ್ತು ತಮಿಳುನಾಡು ರಾಜ್ಯಗಳಿಗೆ ದೊಡ್ಡ ಸವಾಲಾಗಿ ಪರಿಣಮಿಸಿದ್ದ ಕಾಡುಗಳ್ಳ ವೀರಪ್ಪನ್ನನ್ನು ಹೊಡೆದುರುಳಿಸಿದ್ದ ನಿವೃತ್ತ ಐಪಿಎಸ್ ಅಧಿಕಾರಿ ವಿಜಯ್ ಕುಮಾರ್ ಈಗ ಜಮ್ಮು ಕಾಶ್ಮೀರ ರಾಜ್ಯಪಾಲರ ಸಲಹೆಗಾರ.
ವಿಜಯ್ ಕುಮಾರ್ ಅವರನ್ನು ಜ.ಕಾಶ್ಮೀರ ರಾಜ್ಯಪಾಲ ಎನ್ಎನ್ ವೊಹ್ರಾ ಅವರ ಸಲಹೆಗಾರರನ್ನಾಗಿ ನೇಮಕ ಮಾಡಲಾಗಿದೆ. ಅಲ್ಲಿ ರಾಜ್ಯಪಾಲ ಆಡಳಿತ ಜಾರಿಯಾಗಿರುವುದರಿಂದ ಇವರ ಸಲಹೆ ಸೂಚನೆಗಳು ಆಡಳಿತದಲ್ಲಿ ಮಹತ್ತರ ಪಾತ್ರವನ್ನು ವಹಿಸಲಿದೆ.
ನಕ್ಸಲ್ ವಿರೋಧಿ ಕಾರ್ಯಾಚರಣೆಯಲ್ಲಿ ಪರಿಣಿತರಾಗಿರುವ ಇವರಿಗೆ, ಈ ಹಿಂದೆ ಬಿಎಸ್ಎಫ್ನ ಇನ್ಸ್ಪೆಕ್ಟರ್ ಜನರಲ್ ಆಗಿ, ಸಿಆರ್ಪಿಎಫ್ನ ನಿರ್ದೇಶಕರಾಗಿ ಕಾರ್ಯನಿರ್ವಹಣೆ ಮಾಡಿದ ಅನುಭವವೂ ಇದೆ.
ಕಾಡುಗಳ್ಳ ವೀರಪ್ಪನನ್ನು ಇವರ ನೇತೃತ್ವದ ತಂಡ ಯಶಸ್ವಿ ಕಾರ್ಯಾಚರಣೆಯನ್ನು ಮಾಡಿ ಹೊಡೆದುರುಳಿಸಿತ್ತು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.