ನವದೆಹಲಿ: ಸಾಮಾಜಿಕ ಜಾಲತಾಣಗಳಲ್ಲಿ ಇತ್ತೀಚಿಗೆ ಸುಳ್ಳು ಸುದ್ದಿಗಳ ಹರಡುವಿಕೆ ಹೆಚ್ಚಾಗಿದೆ. ಇವುಗಳಲ್ಲಿ ಬರುವ ಸುದ್ದಿಗಳನ್ನು ನಂಬಬೇಕೋ ಅಥವಾ ಬೇಡವೋ ಎಂಬ ಗೊಂದಲ ಎಲ್ಲರನ್ನೂ ಕಾಡುತ್ತಿದೆ. ಈ ಹಿನ್ನಲೆಯಲ್ಲಿ ಜಾಗೃತ ಹೆಜ್ಜೆ ಇಡಲು ಮುಂದಾಗಿರುವ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರು, ತನ್ನ ಕಾರ್ಯಕರ್ತರಿಗೆ ನಕಲಿ ಸುದ್ದಿಗಳನ್ನು ಪೋಸ್ಟ್ ಮಾಡದಂತೆ ಎಚ್ಚರಿಕೆ ನೀಡಿದ್ದಾರೆ.
ಸೋಶಲ್ ಮೀಡಿಯಾದಲ್ಲಿ ಕಾರ್ಯನಿರ್ವಹಿಸುವ ಕಾರ್ಯಕರ್ತರೊಂದಿಗೆ ಗುರುವಾರ ದೆಹಲಿಯಲ್ಲಿ ಸಭೆ ನಡೆಸಿದ ಶಾ, ನಕಲಿ ಸುದ್ದಿಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಾಕುವಂತಹ ತಪ್ಪು ಮಾಡಬೇಡಿ, ಇದರಿಂದ ಜನರಿಗೆ ನಮ್ಮ ಮೇಲೆ ಇರುವ ನಂಬಿಕೆ ಹೋಗುತ್ತದೆ. ನಮ್ಮ ವಿಶ್ವಾಸಾರ್ಹತೆ ಕುಂಠಿತಗೊಳ್ಳುತ್ತದೆ ಎಂದಿದ್ದಾರೆ.
ಬಿಜೆಪಿ ಸರ್ಕಾರದ ನಾಲ್ಕು ವರ್ಷಗಳ ಸಾಧನೆಯನ್ನು ಸೋಶಲ್ ಮೀಡಿಯಾ ಮೂಲಕ ನಾವು ಜನರ ಬಳಿಗೆ ತಲುಪಿಸಬೇಕಾಗಿದೆ. ನಕಲಿ ಸುದ್ದಿ, ಫೋಟೋ, ದಾಖಲೆಗಳನ್ನು ಫೇಸ್ಬುಕ್, ಟ್ವಿಟರ್, ವಾಟ್ಸಾಪ್ಗಳಲ್ಲಿ ಅಪ್ಲೋಡ್ ಮಾಡುವಂತಹ ತಪ್ಪು ನಮ್ಮಿಂದಾಗಬಾರದು, ಇದರಿಂದ ವಿಶ್ವಾಸಾರ್ಹತೆಯನ್ನು ಕಳೆದುಕೊಳ್ಳುತ್ತೇವೆ ಎಂದಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.