ಬೆಂಗಳೂರು: ರಾಜ್ಯದಲ್ಲಿ ಸಿದ್ದರಾಮಯ್ಯ ಸರ್ಕಾರ ಹೋಗಿ ಕುಮಾರ ಸ್ವಾಮಿ ಸರ್ಕಾರ ಬಂದರೂ ಟಿಪ್ಪು ಸುಲ್ತಾನ್ ವಿವಾದ ಮರೆಯಾಗುವ ಲಕ್ಷಣ ಕಾಣುತ್ತಿಲ್ಲ. ಹಜ್ ಭವನಕ್ಕೆ ’ಟಿಪ್ಪು ಸುಲ್ತಾನ್ ಘರ್’ ಎಂದು ನಾಮಕರಣಗೊಳಿಸುವ ಪ್ರಸ್ತಾಪದ ಬಗ್ಗೆ ಪರಿಶೀಲನೆ ನಡೆಸುತ್ತಿರುವುದಾಗಿ ಸಚಿವ ಜಮೀರ್ ಅಹ್ಮದ್ ಹೇಳಿರುವುದು ಮತ್ತೊಂದು ಸುತ್ತಿನ ವಿವಾದಕ್ಕೆ ಕಿಡಿ ಹೊತ್ತಿಸಿದೆ.
‘ಹಜ್ ಒಂದು ಸ್ವತಂತ್ರ ಸಂಸ್ಥೆಯಾಗಿದೆ, ಇದಕ್ಕೆ ಟಿಪ್ಪು ಹೆಸರನ್ನಿಡಲು ಪ್ರಸ್ತಾಪ ಬಂದಿದೆ. ಇದರಲ್ಲಿ ಯಾವ ತಪ್ಪೂ ಇಲ್ಲ. ಈ ಬಗ್ಗೆ ಕುಮಾರ ಸ್ವಾಮಿ ಮತ್ತು ಕಾಂಗ್ರೆಸ್ ನಾಯಕರೊಂದಿಗೆ ಚರ್ಚಿಸಿ ನಿರ್ಧರಿಸುತ್ತೇವೆ’ ಎಂಬ ಜಮೀರ್ ಮಾತು ಪ್ರತಿಪಕ್ಷ ಬಿಜೆಪಿ ಸೇರಿದಂತೆ ಅನೇಕರನ್ನು ಕೆರಳಿಸಿದೆ.
ಹಿಂದೂ ವಿರೋಧಿ ಮತ್ತು ಹಲವಾರು ಜನರನ್ನು ಬಲವಂತವಾಗಿ ಇಸ್ಲಾಂಗೆ ಮತಾಂತರ ಮಾಡಿದ ಟಿಪ್ಪುವಿನ ಹೆಸರನ್ನು ಜನರ ತೆರಿಗೆ ಹಣದಿಂದ ನಡೆಯುತ್ತಿರುವ ಹಜ್ ಭವನಕ್ಕೆ ಇಡಲು ಮುಂದಾಗಿರುವ ಕ್ರಮಕ್ಕೆ ತೀವ್ರ ವಿರೋಧ ವ್ಯಕ್ತವಾಗಿದೆ. ಒಂದು ವೇಳೆ ಸರ್ಕಾರ ಈ ಪ್ರಸ್ತಾಪವನ್ನು ಒಪ್ಪಿದರೆ ತೀವ್ರ ಸ್ವರೂಪದ ಪ್ರತಿಭಟನೆ ನಡೆಸುವುದಾಗಿ ಬಿಜೆಪಿ ಎಚ್ಚರಿಕೆ ನೀಡಿದೆ.
ನೈಜ ವಿಷಯಗಳಿಂದ ಜನರ ಗಮನವನ್ನು ಬೇರೆಡೆ ಸೆಳೆಯಲು ಸರ್ಕಾರ ಈ ವಿವಾದವನ್ನು ಮುನ್ನೆಲೆಗೆ ತರುತ್ತಿದೆ ಎಂದು ಬಿಜೆಪಿ ಗಂಭೀರ ಆರೋಪ ಮಾಡಿದೆ.
ಸಿದ್ದರಾಮಯ್ಯ ಸರ್ಕಾರದ ಟಿಪ್ಪು ಮೋಹ ಹಲವಾರು ರಾದ್ಧಾಂತಗಳನ್ನು ಸೃಷ್ಟಿಸಿತ್ತು. ಪ್ರಸ್ತುತ ಇರುವ ಸರ್ಕಾರವಾದರೂ ಇಂತಹ ಅನಗತ್ಯ ವಾದ-ವಿವಾದ, ಗಲಾಟೆ ನಡೆಯದಂತೆ ಎಚ್ಚರಿಕೆ ವಹಿಸಬೇಕಾದುದು ಅಗತ್ಯ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.