ಮಂಗಳೂರು : ಐಸಿಎಆರ್-ಕೃಷಿ ವಿಜ್ಞಾನ ಕೇಂದ್ರ, ದಕ್ಷಿಣ ಕನ್ನಡ (ಕರ್ನಾಟಕ ಪಶು ವೈದ್ಯಕೀಯ ಪ್ರಾಣಿ ಹಾಗೂ ಮೀನುಗಾರಿಕಾ ವಿಜ್ಞಾನಗಳ ವಿಶ್ವವಿದ್ಯಾನಿಲಯ, ಬೀದರ್) ರಾಷ್ಟ್ರೀಯ ಕೃಷಿ ವಿಸ್ತರಣಾ ಸಂಸ್ಥೆ, ಹೈದರಾಬಾದ್ ಮತ್ತು ಸಮೇತಿ, ಕೃಷಿ ವಿಶ್ವವಿದ್ಯಾನಿಲಯ, ಬೆಂಗಳೂರು ಇವರ ಸಂಯುಕ್ತ ಆಶ್ರಯದಲ್ಲಿ ರಸಗೊಬ್ಬರ ಮಾರಾಟಗಾರರಿಗೆ ಕೃಷಿ ವಿಸ್ತರಣಾ ಸೇವೆಯಲ್ಲಿ ಡಿಪ್ಲೋಮಾ ಪದವಿ ಪ್ರಮಾಣ ವಿತರಣಾ ಕಾರ್ಯಕ್ರಮ ನಡೆಯಿತು. ಎಕ್ಕೂರು ಮೀನುಗಾರಿಕಾ ಕಾಲೇಜಿನಲ್ಲಿ ನಡೆದ ಸಮಾರಂಭದಲ್ಲಿ ಮಂಗಳೂರು ನಗರ ದಕ್ಷಿಣ ಶಾಸಕ ವೇದವ್ಯಾಸ ಕಾಮತ್ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಕೃಷಿ ವಿಧಾನ ಇಂದು ಆಧುನಿಕ ಸ್ಪರ್ಶ ಪಡೆದಿದೆ. ಹಿಂದಿನಂತೆ ಹಗಲಿರುಳು ಕೆಸರಿನಲ್ಲಿ ಹೊರಳಾಡಬೇಕಾದ ಅನಿವಾರ್ಯತೆ ಇಲ್ಲ. ಆದರೂ ಕೂಡ ಹಿಂದಿಗಿಂತ ಕೃಷಿಕರ ಸಂಖ್ಯೆಯಲ್ಲಿ ವಿಪರೀತ ಕುಸಿತ ಕಂಡಿದೆ. ಇದು ಹೀಗೆ ಮುಂದುವರೆದರೆ ತಿನ್ನುವ ಅನ್ನಕ್ಕೂ ಪರದಾಡಬೇಕಾದ ಸ್ಥಿತಿ ನಿರ್ಮಾಣವಾಗಲಿದೆ. ಕೃಷಿಕರಿಗೆ ಕೋರ್ಸ್ ಪ್ರಾರಂಭಿಸಿ ತರಗತಿ ಯಶಸ್ವಿಯಾಗಿದೆ ಎಂದರು. ಮಂಗಳೂರು ಮೀನುಗಾರಿಕಾ ಮಹಾವಿದ್ಯಾಲಯ ಡೀನ್ ಡಾ| ಎಂ ಎನ್ ವೇಣುಗೋಪಾಲ್ ಅಧ್ಯಕ್ಷತೆ ವಹಿಸಿದ್ದರು.
ಬೆಂಗಳೂರು ಕೃಷಿ ವಿಶ್ವವಿದ್ಯಾನಿಲಯದ ಕುಲಪತಿ ಡಾ| ಎಂಎಸ್ ನಟರಾಜು, ರಾಜ್ಯ ನೋಡಲ್ ಅಧಿಕಾರಿ ಡಾ| ಪೆನ್ನೋಬಳಿ ಸ್ವಾಮಿ, ದಕ ಜಿಲ್ಲಾ ಪಂಚಾಯತ್ ಕೃಷಿ ಇಲಾಖೆ ಜಂಟಿ ಕೃಷಿ ನಿರ್ದೇಶಕ ಆಂಟೋನಿ ಮರಿಯ ಇಮ್ಯಾನ್ಯುಯೆಲ್, ದಕ ಜಿಲ್ಲಾ ಪಂಚಾಯತ್ ತೋಟಗಾರಿಕಾ ಇಲಾಕೆಯ ಉಪನಿರ್ದೇಶಕ ಹೆಚ್ ಆರ್ ನಾಯಕ್, ಪ್ರಾಧ್ಯಾಪಕರಾದ ಡಾ|ಶಿವಕುಮಾರ್ ಮಗದ, ವಿಜ್ಞಾನಿ ಗಣೇಶ್ ಪ್ರಸಾದ್ ಮತ್ತಿತ್ತರರು ಉಪಸ್ಥಿತರಿದ್ದರು
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.