ನವದೆಹಲಿ: 43 ವರ್ಷಗಳ ಹಿಂದೆ ಇದೇ ದಿನ, ಅಂದರೆ 1975ರ ಜೂನ್ 25ರಂದು ಅಂದಿನ ಪ್ರಧಾನ ಮಂತ್ರಿಯಾಗಿದ್ದ ಇಂದಿರಾ ಗಾಂಧಿ ಅವರು ದೇಶದಲ್ಲಿ ತುರ್ತು ಪರಿಸ್ಥಿತಿಯನ್ನು ಹೇರಿದ್ದರು. ಇದನ್ನು ಪ್ರಜಾಪ್ರಭುತ್ವದ ಅತ್ಯಂತ ಕರಾಳ ದಿನ ಎಂದು ಕರೆಯಲಾಗುತ್ತಿದೆ.
ತುರ್ತು ಪರಿಸ್ಥಿತಿಯ ಸಂದರ್ಭ ಸರ್ಕಾರದ ವಿರುದ್ಧ ಪ್ರತಿಭಟನೆ ಮಾಡಿದ್ದ ಪ್ರತಿಪಕ್ಷಗಳ ನಾಯಕರನ್ನು ಬಂಧಿಸಲಾಗಿತ್ತು, ಚುನಾವಣೆಯನ್ನು ಮುಂದೂಡಲಾಗಿತ್ತು, ಪತ್ರಿಕಾ ಸ್ವಾತಂತ್ರ್ಯವನ್ನು ಹತ್ತಿಕ್ಕಲಾಯಿತು. ಜನರ ಸಂವಿಧಾನ ಬದ್ಧವಾದ ಎಲ್ಲಾ ಹಕ್ಕುಗಳನ್ನು ಮೊಟಕುಗೊಳಿಸಲಾಗಿತ್ತು. ದೇಶದ ಇತಿಹಾಸದಲ್ಲಿ ನಡೆದ ಅತ್ಯಂತ ಕರಾಳ ಸನ್ನಿವೇಶ ಇದೆಂದು ಬಣ್ಣಿಸಲಾಗಿದೆ.
ಇಂದಿನ ದಿನವನ್ನು ಬಿಜೆಪಿ ಪಕ್ಷ ‘ಕರಾಳ ದಿನ’ ಎಂದು ಆಚರಿಸಿದೆ. ಇಂದಿರಾ ಗಾಂಧಿ ನೇತೃತ್ವದ ಕಾಂಗ್ರೆಸ್ ಸರ್ಕಾರ ಮಾಡಿದ ಆ ಘನಘೋರ ತಪ್ಪನ್ನು ಜನರಿಗೆ ನೆನೆಪು ಮಾಡಿಕೊಟ್ಟಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.