ಮಂಗಳೂರು: ಮಂಗಳೂರು ಮಹಾನಗರ ಪಾಲಿಕೆಗೆ ‘ಘನ ತ್ಯಾಜ್ಯ ನಿರ್ವಹಣೆಯಲ್ಲಿ ದೇಶದ ಅತ್ಯುತ್ತಮ ನಗರ’ ಎಂಬ ಪ್ರಶಸ್ತಿಯನ್ನು ನೀಡಲಾಗಿದೆ. ಸ್ವಚ್ಛ ಸರ್ವೇಕ್ಷಣಾ 2018ರ 3 ಲಕ್ಷದಿಂದ 10 ಲಕ್ಷ ಜನಸಂಖ್ಯಾ ವಿಭಾಗದಲ್ಲಿ ಈ ಪ್ರಶಸ್ತಿ ದೊರೆತಿದೆ.
ಭಾರತದ ನಂ.1 ಸ್ವಚ್ಛ ನಗರವಾಗಿ ಮಧ್ಯಪ್ರದೇಶದ ಇಂಧೋರ್ ಹೊರಹೊಮ್ಮಿದೆ.
ಕೇಂದ್ರ ವಸತಿ ಮತ್ತು ನಗರಾಭಿವೃದ್ಧಿ ಸಚಿವ ಹರ್ದೀಪಸಿಂಗ್ ಪುರಿ ಅವರು ಪ್ರಶಸ್ತಿ ಪ್ರದಾನ ಮಾಡಿದ್ದಾರೆ. ಮಂಗಳೂರು ಮಹಾನಗರ ಪಾಲಿಕೆ ಮೇಯರ್ ಭಾಸ್ಕರ್.ಕೆ, ಕಮಿಷನರ್ ಮೊಹಮ್ಮದ್ ನಝೀರ್ ಮುಂತಾದವರು ಪ್ರಶಸ್ತಿ ಸ್ವೀಕಾರ ಮಾಡಿದರು.
ಸ್ವಚ್ಛ ಸರ್ವೇಕ್ಷಣ್ ಸಮೀಕ್ಷೆಯ ವಿವಿಧ ವಿಭಾಗಗಳಲ್ಲಿ 23 ನಗರಗಳನ್ನು ಆಯ್ಕೆ ಮಾಡಿ ರಾಷ್ಟ್ರ ಪ್ರಶಸ್ತಿಗಳನ್ನು ನೀಡಲಾಗಿದೆ. ಇವುಗಳಲ್ಲಿ ಮಂಗಳೂರು ಕೂಡ ಒಂದಾಗಿದೆ.
2018ರ ಜನವರಿ 4ರಿಂದ ಮಾರ್ಚ್ 10ಸಮೀಕ್ಷೆ ನಡೆದಿತ್ತು. ಫೆಬ್ರವರಿಯಲ್ಲಿ ಕೇಂದ್ರ ತಂಡ ನಾಲ್ಕು ದಿನಗಳ ಕಾಲ ಮಂಗಳೂರಿನಲ್ಲಿ ಸಮೀಕ್ಷೆ ನಡೆಸಿತ್ತು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.