ಮುಂಬಯಿ: ರೈಲು ಪ್ರಯಾಣಿಕರನ್ನು ಸುರಕ್ಷಿತವಾಗಿಡಲು ಬಯಸುತ್ತಿರುವ ಸಚಿವ ಪಿಯೂಶ್ ಗೋಯಲ್ ನೇತೃತ್ವದ ಭಾರತೀಯ ರೈಲ್ವೇ, ತಂತ್ರಜ್ಞಾನವನ್ನು ಸುಧಾರಿಸಲು ನಿರ್ಧರಿಸಿದೆ. ಇದಕ್ಕಾಗಿ ಅದು ಇಸ್ರೇಲಿ ತಂತ್ರಜ್ಞಾನವನ್ನು ಅಳವಡಿಸಲು ಮುಂದಾಗಿದೆ.
ಮೂಲಗಳ ಪ್ರಕಾರ ಸೆಂಟ್ರಲ್ ರೈಲ್ವೇಯು, ಪ್ಲಾಟ್ಫಾರ್ಮ್, ಎಂಟ್ರಿ, ಫೂಟ್ ಓವರ್ ಬ್ರಿಡ್ಜ್, ಎಕ್ಸಿಟ್ ಪಾಯಿಂಟ್ಗಳಲ್ಲಿ ಅಳವಡಿಸಲಾದ ಸಿಸಿಟಿವಿ ಕ್ಯಾಮೆರಾಗಳ ವೀಡಿಯೋ ಅನಾಲಿಟಿಕ್ಸ್ನ್ನು ಸುಧಾರಣೆಗೊಳಿಸಲು ಮುಂದಾಗಿದೆ. ಇದಕ್ಕಾಗಿ ಇಸ್ರೇಲ್ನಿಂದ ತಂತ್ರಜ್ಞಾನವನ್ನು ಆಮದು ಮಾಡಿಕೊಳ್ಳಲಿದೆ.
ಈ ಪ್ರಾಯೋಗಿಕ ಯೋಜನೆಗಾಗಿ ಥಾಣೆ, ಕಲ್ಯಾಣ್ ರೈಲ್ವೇ ಸ್ಟೇಶನ್ಗಳನ್ನು ಆಯ್ಕೆ ಮಾಡಲಾಗಿದೆ.
ಅಷ್ಟೇ ಅಲ್ಲದೇ ಆರ್ಟಿಫೀಶಿಯಲ್ ಇಂಟೆಲಿಜೆನ್ಸ್ ಮೂಲಕ ಅದು ಕ್ರೌಡ್ ಕಂಟ್ರೋಲ್ ಕ್ರಮಗಳನ್ನು ತೆಗೆದುಕೊಳ್ಳಲು ಮುಂದಾಗಿದೆ. ಇದಕ್ಕಾಗಿ ಇಸ್ರೇಲ್ನ ಸಾರ್ವಜನಿಕ ವ್ಯವಸ್ಥೆಯಲ್ಲಿ ಅಳವಡಿಸಲಾದ ತಂತ್ರಜ್ಞಾನವನ್ನು ಬಳಕೆ ಮಾಡಲಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.