ಟೆಲ್ ಅವೀವ್: ಗುಜರಾತ್ ಮತ್ತು ಇಸ್ರೇಲ್ ನಡುವೆ ಜಂಟಿ ಕಾರ್ಯ ಪಡೆ ರಚನೆ ಮಾಡುವುದಾಗಿ ಗುಜರಾತ್ ಸಿಎಂ ವಿಜಯ್ ರೂಪಾಣಿ ಘೋಷಣೆ ಮಾಡಿದ್ದಾರೆ.
ಇಸ್ರೇಲ್ ಪ್ರವಾಸದಲ್ಲಿರುವ ಅವರು, ಅಲ್ಲಿನ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಸಚಿವ ಉರಿ ಏರೀಲ್ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು. ಬಳಿಕ ಉಭಯ ನಾಯಕರು ಜಂಟಿ ಕಾರ್ಯಪಡೆ ರಚಿಸುವ ಬಗ್ಗೆ ಘೋಷಣೆ ಮಾಡಿದರು.
ಕೃಷಿ, ತೋಟಗಾರಿಕೆ, ಸೇರಿದಂತೆ ಇತರ ವಲಯಗಳಿಗಾಗಿ ಜಂಟಿ ಕಾರ್ಯಪಡೆ ರಚನೆಗೊಳ್ಳಲಿದೆ.
ಏರೀಲ್ರನ್ನು ಭೇಟಿಯಾದ ಬಳಿಕ ಮಾತನಾಡಿದ ರೂಪಾಣಿ, ‘ಹೆಚ್ಚುವರಿ ಕೃಷಿ ಕಾರ್ಯದರ್ಶಿ ಸಂಜಯ್ ಪ್ರಸಾದ್ ಅವರ ನೇತೃತ್ವದಲ್ಲಿ ಜಂಟಿ ಕಾರ್ಯ ಪಡೆ ರಚನೆಯಾಗಲಿದೆ. ಕೃಷಿ, ತೋಟಗಾರಿಕೆಯಲ್ಲಿ ಇದು ನಿರಂತರವಾಗಿ ಕಾರ್ಯನಿರ್ವಹಿಸಲಿದೆ’ ಎಂದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.